ಬೆಂಗಳೂರು: ಲಾಕ್‌ಡೌನ್ ನಡುವೆಯೂ ನಡೆದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಕರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಪಿಐಎಲ್‌ಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು.
ಈ ವೇಳೆ, ನಿಖಿಲ್ ಕುಮಾರಸ್ವಾಮಿ ಮದುವೆ ವಿಚಾರ ಪ್ರಸ್ತಾಪಿಸಿದ ಪೀಠ, ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ್ದರು, ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿತು.
ಇದಲ್ಲದೆ, ಶಾಸಕರು, ಸಂಸದರು, ಸಚಿವರು ಸೇರಿ ಜನಪ್ರತಿನಿಧಿಗಳು ಸಾವರ್ಜನಿಕರಿಗೆ ಆಹಾರ, ದಿನಸಿ ಇನ್ನಿತರ ಜೀವನಾವಶ್ಯಕ ವಸ್ತುಗಳನ್ನು ವಿತರಣೆ ಮಾಡುತ್ತಿದ್ದು, ಹಲವೆಡೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿಲ್ಲವೆಂದು ನ್ಯಾಯಾಧೀಶರು ಬೇಸರ ವ್ಯಕ್ತಪಡಿಸಿದರು. ಜನಪ್ರತಿನಿಧಿಗಳ ಕಾರ್ಯಕ್ರಮಗಳ ಪರಿಸ್ಥಿತಿಯೇ ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು.
ಸಾಮಾಜಿಕ ಅಂತರ ಕಾಪಾಡುವ ಸಂಬಂಧ ಜನಪ್ರತಿನಿಧಿಗಳಿಗೆ ಯಾವ ಸೂಚನೆಗಳನ್ನು ನೀಡಲಾಗಿದೆ, ಇಂಥ ಘಟನೆಗಳು ಮರುಕಳಿಸದಂತೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿತು.
ದೇಶದಲ್ಲಿ ಒಂದೇ ದಿನ 1421 ಮಂದಿಗೆ ಕರೊನಾ ಸೋಂಕು: 20 ಸಾವಿರ ಸನಿಹಕ್ಕೆ ಬಂತು ಸೋಂಕಿತರ ಸಂಖ್ಯೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 + nineteen =
Remember me
