ಬೆಂಗಳೂರು:ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಜೆಡಿಎಸ್-ಬಿಜೆಪಿ ಮೈತ್ರಿ, ಮುಂಬರುವ ಲೋಕಸಭೆ ಚುನಾವಣೆಗೆ ನಡೆದಿರುವ ಸಿದ್ಧತೆ, ಕ್ಷೇತ್ರ ಹಂಚಿಕೆ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.
ಪಕ್ಷದ ಕಚೇರಿಯಲ್ಲಿ ವಿವಿಧ ಲೋಕಸಭೆ ಕ್ಷೇತ್ರಗಳ ಮುಖಂಡರ ಜತೆ ಸಭೆಗಳನ್ನು ನಡೆಸಿದ್ದು ಹಾಗೂ ಆ ಸಭೆಗಳ ಫಲಶ್ರುತಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಬಿಜೆಪಿ ರಾಷ್ಟ್ರೀಯ ನಾಯಕರ ಜತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ತೆರಳಿ ನಡೆಸಿರುವ ಚರ್ಚೆಗಳ ಮಾಹಿತಿಯನ್ನು ಹಂಚಿಕೊಂಡರು.
ಯಾವುದೇ ಸಂದರ್ಭದಲ್ಲಿಯೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಅದಕ್ಕೆ ಪಕ್ಷ ತಯಾರಿರಬೇಕು. ಯುವ ಜನತಾದಳ ಕಾರ್ಯಕರ್ತರನ್ನು ಪಕ್ಷದ ಕೆಲಸಕ್ಕೆ ತೊಡಗಿಸಬೇಕು. ಪಕ್ಷಕ್ಕೆ ಅವಿಶ್ರಾಂತವಾಗಿ ದುಡಿಮೆ ಮಾಡಬೇಕು ಎಂದು ದೇವೇಗೌಡರು ನಿಖಿಲ್ ಕುಮಾರಸ್ವಾಮಿಗೆ ಸೂಚಿಸಿದರು.ಸರಣಿ ಸಭೆಗಳನ್ನು ಮುಂದುವರಿಸಬೇಕು. ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳುವಂತೆ ದೇವೇಗೌಡರು ಕಿವಿ ಮಾತು ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − six =
Remember me
