ಬೆಂಗಳೂರು:ಮಾನಸಿಕ ರೋಗಗಳಿಗೆ ಚಿಕಿತ್ಸೆ ಒದಗಿಸುತ್ತಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 75ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಇದರ ಅಂಗವಾಗಿ ಇಂದು (ಆ. 23) ಬೆಳಿಗ್ಗೆ 11 ಗಂಟೆಗೆ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಪ್ಲಾಟಿನಮ್ ಜುಬಲಿ ಇಯರ್ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ ಹಾಗೂ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಜಿ.ಎನ್. ನಾರಾಯಣ ರೆಡ್ಡಿ, ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಇತರರು ಭಾಗವಹಿಸಲಿದ್ದಾರೆ. ಕಾಯಕ್ರಮದಲ್ಲಿ ನಿಮ್ಹಾನ್ಸ್ ಸಾಗಿಬಂದ ಹಾದಿ ಹಾಗೂ ಸಂಸ್ಥೆಯ ಸಾಧನೆಯನ್ನು ಬಿಂಬಿಸುವ ಕಿರುಚಿತ್ರ ಪ್ರಸಾರವಾಗಲಿದೆ.
ಚಾರ್ಲ್ಸ್ ಸ್ಮಿತ್‌ಯಿಂದ ಸ್ಥಾಪನೆ: ಮಾನಸಿಕ ರೋಗಿಗಳಿಗೆ ಚಿಕಿತ್ಸೆ ಒದಗಿಸಲು 1874ರಲ್ಲಿ ಬ್ರಿಟಿಷ್ ವೈದ್ಯ ಚಾರ್ಲ್ಸ್ ಸ್ಮಿತ್ ಬೆಂಗಳೂರು ಲುನಾಟಿಕ್ ಅಸಿಲಮ್ ಸ್ಥಾಪಸಿದರು. 1925ರಲ್ಲಿ ಮೈಸೂರು ಸರ್ಕಾರಿ ಮಾನಸಿಕ ಆಸ್ಪತ್ರೆ ಎಂದು ಮರುನಾಮಕರಣಗೊಂಡಿತು. 1936ರಲ್ಲಿ ಮೈಸೂರಿನ ಕೃಷ್ಣರಾಜ ಒಡೆಯರ್ ಅವರು ಸ್ವಂತ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. 1940ರಲ್ಲಿ ಆಸ್ಪತ್ರೆಯು ಬೋಧನಾ ಸಂಸ್ಥೆಯಾಗಿ ಮಾನ್ಯತೆ ಪಡೆದುಕೊಂಡಿತು. 1974ರಲ್ಲಿ ಮೈಸೂರು ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಮಾನಸಿಕ ಆಸ್ಪತ್ರೆಯನ್ನು ಕೇಂದ್ರ ಸರ್ಕಾರದಿಂದ ಸ್ಥಾಪಿತವಾದ ಅಖಿಲ ಭಾರತ ಮಾನಸಿಕ ಆರೋಗ್ಯ ಸಂಸ್ಥೆಯೊಂದಿಗೆ ವಿಲೀನಗೊಳಿಸಿ, ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯನ್ನಾಗಿ ರಚಿಸಲಾಯಿತು.
ಸ್ವಾಯತ್ತ ವಿಶ್ವವಿದ್ಯಾಲಯವಾಗಿಯೂ ಘೋಷಿಸಲ್ಪಟ್ಟ ಸಂಸ್ಥೆಯು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು, ವಿವಿಧ ಸಂಶೋಧನೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ದೇಶದ ವಿವಿಧ ಭಾಗಗಳಿಂದ ಚಿಕಿತ್ಸೆ ಬರುತ್ತಾರೆ. ನಿತ್ಯ 1,700ಕ್ಕೂ ಅಧಿಕ ಹೊರ ರೋಗಿಗಳು ಚಿಕಿತ್ಸೆಗೆ ಒದಗಿಸಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
