ದಾವಣಗೆರೆ:ಸಚಿವ ಭೈರತಿ ಬಸವರಾಜ್ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ ಎಂದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಹರಿಹರ ತಾಲೂಕಿನ ಬೆಳ್ಳೂಡಿಯ ಕನಕ ಗುರುಪೀಠದ ಶಾಖಾ ಮಠದಲ್ಲಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರ ವಿರುದ್ಧ ಗರಂ ಆದ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನ ಬದಲಾಯಿಸಲು ನೋಡಿದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದರು.
ಇದನ್ನೂ ಓದಿರಿಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಮುಸ್ಲಿಂ ಮುಖಂಡರ ಭೇಟಿ, ಮನೆ ಕಟ್ಟಿಸಿಕೊಡುವುದಾಗಿ ಭರವಸೆ!
ನೀವು ಬೇಕಾದ್ರೆ ಸಚಿವರಾಗಿ, ಆದ್ರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನ ಬದಲಾಯಿಸಲು ನೋಡಿದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಈ ಬಗ್ಗೆ ನಾನು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ನಿರಂಜನಾನಂದ ಪುರಿ ಸ್ವಾಮೀಜಿ ಗುಡುಗಿದರು.
ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿಯ ಐವರು ಶಾಸಕರು ಇದ್ದರೂ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಅಸಮಾಧನದ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ನಿರಂಜನಾನಂದ ಪುರಿ ಸ್ವಾಮೀಜಿ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
