ಅಮೆರಿಕ:ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 8 ಕೋಟಿ ರೂ ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಕಾಮಗಾರಿ ಪರಿಶೀಲಿಸಿದ್ದಾರೆ.
ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್​​ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ.
ಇದನ್ನೂ ಓದಿ:ಮಳೆಗಾಲದಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರೆ ಈ ಸ್ಥಳ ಬೆಸ್ಟ್
ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (8 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four × one =
Remember me
