ರಾಮನಗರ: ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಯಾಗಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಅಥವಾ ರಾಷ್ಟ್ರಪತಿಗಳನ್ನು ಕರೆತರುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದರು.
ಗುರುವಾರ ರಾಮನಗರಕ್ಕೆ ಹೆಲಿಕಾಫ್ಟರ್​ನಲ್ಲಿ ಆಗಮಿಸಿದ ನಿತಿನ್​ ಗಡ್ಕರಿ, ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಪರಿಶೀಲನೆ ನಡೆಸಿದರು. ಇದಕ್ಕೂ ಮುನ್ನ ಭಾರತ್ ಮಾಲಾ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಚೆನ್ನೈ ಎಕ್ಸ್‌ಪ್ರೆಸ್ ಹೈವೆ ಕಾಮಗಾರಿಯನ್ನು ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಪರಿಶೀಲನೆ ನಡೆಸಿದರು. ಬಳಿಕ ರಾಮನಗರಕ್ಕೆ ಆಗಮಿಸಿದರು. ಬಸ್​ನಲ್ಲಿ ತೆರಳಿ ದಶಪಥ ಹೆದ್ದಾರಿಯನ್ನು ಪರಿಶೀಲಿಸಿದರು.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತಿನ್ ಗಡ್ಕರಿ, ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅಥವಾ ರಾಷ್ಟ್ರಪತಿಗಳು ದಶಪಥ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ. ಸ್ಥಳೀಯ ಶಾಸಕರು ಮತ್ತು ಸಂಸದರು ಒಂದಷ್ಟು ಸಲಹೆ ನೀಡಿದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡಲಾಗುವುದು. ಹೆದ್ದಾರಿ ಕಂಪ್ಲೀಟ್ ಆದ್ರೆ 90 ನಿಮಿಷದಲ್ಲಿ ಬೆಂಗಳೂರು-ಮೈಸೂರು ನಡುವೆ ಸಂಚಾರ ಮಾಡಬಹುದು. ಹೆದ್ದಾರಿಯಿಂದ ಮೈಸೂರು, ಶ್ರೀರಂಗಪಟ್ಟಣ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ. ಪಬ್ಲಿಕ್ ಟ್ರಾನ್ಸ್‌ಪೋರ್ಟ್​ಗೂ ಹೆಚ್ಚಿನ ಒತ್ತು ನೀಡ್ತೇವೆ. ರಾಮನಗರ ಹಾಗೂ ಮಂಡ್ಯ ಜಿಲ್ಲೆಗೆ ಕನೆಕ್ಟಿವಿಟಿ ಸುಗಮ ಆಗಲಿದೆ. ಐಟಿ ಉದ್ಯಮಕ್ಕೂ ಇದು ಅನುಕೂಲ ಎಂದರು. ಅಶ್ವಥನಾರಾಯಣ್, ಗೋಪಾಲಯ್ಯ, ಪ್ರತಾಪ್​ ಸಿಂಹ, ಡಿ.ಕೆ.ಸುರೇಶ್​, ಸಿ.ಪಿ.ಯೋಗೇಶ್ವರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು

18 ಸಾವಿರ ಮಂದಿಯನ್ನ ಕೆಲಸದಿಂದ ವಜಾ ಮಾಡುವುದಾಗಿ ಅಮೆಜಾನ್​ ಘೋಷಣೆ! ಉದ್ಯೋಗಿಗಳಲ್ಲಿ ಆತಂಕ

ದೇವಸ್ಥಾನದ ಆಲದ ಮರಕ್ಕೆ​ ವಾಹನ ಡಿಕ್ಕಿ, ಸವದತ್ತಿ ಯಲ್ಲಮ್ಮದೇವಿಯ 6 ಭಕ್ತರು ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − two =
Remember me
