ಬೆಂಗಳೂರು :ಕೈಲಾಸ ದೇಶದಲ್ಲಿ ಅತ್ಯುನ್ನತ ಸಾಂವಿಧಾನಿಕ ನ್ಯಾಯಾಧೀಶರು ಯಾರು?, ನೀವೂ ಕೈಲಾಸ ದೇಶಕ್ಕೆ ತೆರಳಿ ಮೋಜು-ಮಸ್ತಿ ಮಾಡಿ!, ಕೈಲಾಸ ದೇಶದಲ್ಲಿ ನಿತ್ಯಾನಂದ ಕಿಂಗ್ ಆಫ್ ಕಿಂಗ್…! ಹೀಗೆಂದು ಹೈಕೋರ್ಟ್ ನ್ಯಾಯಮೂರ್ತಿ ನಗೆ ಚಟಾಕಿ ಹಾರಿಸಿದರು.
ಜಾರ್ಖಂಡ್‌ನ ರಾಂಚಿಯ ದಯಾಶಂಕರ್ ಪಾಲ್ ಎಂಬುವರು ತಮ್ಮ ಪುತ್ರ ಕೃಷ್ಣಕುಮಾರ್ ಪಾಲ್ ಕಾಣೆಯಾಗಿರುವ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಶೇಷ ಸರ್ಕಾರಿ ಅಭಿಯೋಜಕ ಬಿ .ಎ ಬೆಳ್ಳಿಯಪ್ಪ, ಬಿಡದಿಯ ನಿತ್ಯಾನಂದ ಪೀಠದಲ್ಲಿ ಕೃಷ್ಣ ಕುಮಾರ್ ಅವರ ಇರುವಿಕೆ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಆದರೆ, ಅಲ್ಲಿ ಅವರು ಪತ್ತೆಯಾಗಿಲ್ಲ. 3ನೇ ಪ್ರತಿವಾದಿಯಾಗಿರುವ ಬಿಡದಿಯ ನಿತ್ಯಾನಂದ ಧ್ಯಾನ ಪೀಠದಿಂದ ಇ-ಮೇಲ್ ಬಂದಿದೆ. ಮಠದವರಿಗೂ ನಿತ್ಯಾನಂದ ಎಲ್ಲಿದ್ದಾರೆ ಎನ್ನುವ ಮಾಹಿತಿ ಇಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲ ರಾಜಕುಮಾರ್, ನಿತ್ಯಾನಂದ ಕೈಲಾಸದಲ್ಲಿದ್ದಾರೆ ಎಂದರು. ಆಗ ನ್ಯಾಯಪೀಠ, ನಿತ್ಯಾನಂದ ಎಲ್ಲಿದ್ದಾರೆ ಎಂಬ ಮಾಹಿತಿ ಕೊಟ್ಟರೆ ನಾವು (ಹೈಕೋರ್ಟ್) ಪ್ರೊಸೆಸ್ (ನ್ಯಾಯಾಲಯಕ್ಕೆ ಹಾಜರಾಗುವಂತೆ ಕೊಡುವ ಆರ್ಡರ್) ಕೊಡುತ್ತೇವೆ. ಕೈಲಾಸ ದೇಶದಲ್ಲಿ ಅತ್ಯುನ್ನತ ಸಾಂವಿಧಾನಿಕ ನ್ಯಾಯಾಧೀಶರು ಯಾರು? ಕೈಲಾಸದಲ್ಲಿ ನಿತ್ಯಾನಂದ ಮಹಾಸ್ವಾಮಿ ಇದ್ದಾನೆ ಎಂದು ನೀವು ಹೇಳಿದ ಮೇಲೆ ಅದರ ಮಾಹಿತಿ ಕೊಡಿ. ಅದು ನಿಮ್ಮ ಕರ್ತವ್ಯ ಎಂದು ನ್ಯಾಯಪೀಠ ಚಾಟಿ ಬೀಸಿತು.
ಅಲ್ಲದೆ, ನ್ಯಾಯಾಲಯಕ್ಕೆ ಸಹಾಯ ಮಾಡುವುದು ಎಂದರೆ ನಿತ್ಯಾನಂದನ ಬಗ್ಗೆ ಮಾಹಿತಿ ನೀಡುವುದಾಗಿದೆ. ನಿತ್ಯಾನಂದ ಕೈಲಾಸ ದೇಶದಲ್ಲಿ ಕಿಂಗ್ ಆ್ ಕಿಂಗ್ ಎಂದು ಚಟಾಕಿ ಹಾರಿಸಿದರು. ಮುಂದುವರಿದು, ನೀವು ಅದರ ಮಾಹಿತಿ ನೀಡಿದರೆ ಕಾನ್ಸುಲೇಟ್ ಮೂಲಕ ನಾವು (ಹೈಕೋರ್ಟ್) ಪ್ರೊಸೆಸ್ ಕೊಡುತ್ತೇವೆ. ಇಲ್ಲವಾದರೆ ಕಮಿಷನರೇಟ್ ಮೂಲಕ ಪ್ರೊಸೆಸ್ ಕೊಡುತ್ತೇವೆ. ನೀವು (ಅರ್ಜಿದಾರ) ಮಾಹಿತಿ ನೀಡಿದರೆ, ಎಕ್ಸಿಕ್ಯೂಟ್ ಮಾಡಲು ನಿಮ್ಮನ್ನೇ (ಅರ್ಜಿದಾರ) ಕಳುಹಿಸುವೆ. ನೀವು (ಅರ್ಜಿದಾರ) ಕೈಲಾಸ ದೇಶಕ್ಕೆ ತೆರಳಿ ಮೋಜು-ಮಸ್ತಿ ಮಾಡಿ ಬನ್ನಿ ಎಂದು ಹೇಳಿದೆ. .ಜತೆಗೆ ವಿಚಾರಣೆ ಆಲಿಸಿದ ಪೀಠವು ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ, ಮಾ.4ಕ್ಕೆ ವಿಚಾರಣೆ ಮುಂದೂಡಿದೆ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 + 2 =
Remember me
