ಬೆಳಗಾವಿ:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯವೇ ಬೆಚ್ಚಿಬೀಳುವ ರೀತಿಯಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೋಲನುಭವಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಜನಸಾಏವಕ ಸಭೆಯಲ್ಲಿ ಮಾತನಾಡಿದ ಅವರು, ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದೆಲ್ಲವೂ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಂದೆ ಪಕ್ಷದ ಚಿಹ್ನೆಯಡಿ ನಡೆಯುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲೂ ಸ್ಪರ್ಧಿಸಿ ಅಧಿಕಾರ ಹಿಡಿಯುವ ಆತ್ಮವಿಶ್ವಾಸ ಇದೆ. ಆ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು. ಒಂದು ಕಾಲದಲ್ಲಿ ಹಣ, ಹೆಂಡ ಹಾಗೂ ಅಧಿಕಾರದ ಬಲದಿಂದ ಗೆಲುವು ಸಾಧಿಸುತ್ತೇವೆಂದು ಕಾಂಗ್ರೆಸ್ ಅಂದುಕೊಂಡಿತ್ತು. ಆದರೆ, ರಾಜ್ಯದಲ್ಲಿ ನಡೆದ ಎಲ್ಲ ಉಪಚುನಾವಣೆಗಳಲ್ಲಿ ಗೆದ್ದು, 25 ಲೋಕಸಭೆ ಕ್ಷೇತ್ರಗಳನ್ನು ಬಿಜೆಪಿ ಅರಳಿದೆ ಎಂದು ಸಿಎಂ ಹೇಳಿದರು.
ಈ ಭಾಗದಲ್ಲಿ ಜೆಡಿಎಸ್ ಅಡ್ರೆಸ್ ಇಲ್ಲ, ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಮುಂದಿನ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಗೆಲ್ಲುವ ನಿಟ್ಟಿನಲ್ಲಿ ಶ್ರಮಿಸಬೇಕು. ಹಳ್ಳಿಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯತ್​ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಿನ ಅನುದಾನ ನೀಡಲಿದ್ದಾರೆ. ಅವೆಲ್ಲವನ್ನೂ ಸದ್ಬಳಕೆ ಮಾಡಿಕೊಂಡು, ಭ್ರಷ್ಟಾಚಾರ ರಹಿತರ ಅಧಿಕಾರ ಚಲಾಯಿಸಿ ಅಭಿವೃದ್ಧಿ ಸಾಧಿಸಬೇಕು ಎಂದು ಹೇಳಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿಯವರನ್ನು ಕಳೆದುಕೊಂಡು ಕ್ಷೇತ್ರವಲ್ಲ, ಇಡೀ ರಾಜ್ಯದ ಬಿಜೆಪಿ ತಬ್ಬಲಿಯಾಗಿದೆ. ಅವರ ಕನಸುಗಳನ್ನು ನನಸಾಗಿಸಲು ಉಪಚುನಾವಣೆಗೆ ಯಾರೇ ನಿಂತರೂ ಅವರನ್ನು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಬಿಎಸ್​ವೈ ಹೇಳಿದರು.
ಸ್ವಾತಂತ್ರ್ಯ ಬಂದಾಗ ಈ ಜೋಡಿ ದೇಶದಲ್ಲಿ ಇದ್ದಿದ್ದರೆ ಪಾಕಿಸ್ತಾನ ಇರುತ್ತಿತ್ತಾ? ಪಾಕ್ ಬೇಕು ಎಂದವರಿಗೆ ಕಟ್​ ಮಾಡ್ತಿದ್ರು: ಸಿ.ಟಿ.ರವಿ

ಗ್ಯಾಸ್​ ಸಿಲಿಂಡರ್​ ಮನೆಗೆ ತಂದುಕೊಟ್ಟದ್ದಕ್ಕೆ ಹಣ ಕೇಳ್ತಾ ಇದ್ದಾರಾ? ಹಾಗಿದ್ದರೆ ಈ ಮಾಹಿತಿ ಓದಿ…

ಪತ್ನಿ ಮೊಬೈಲ್​ನಲ್ಲಿ, ತಿನ್ನೋದ್ರಲ್ಲಿ, ಅಲಂಕಾರ ಮಾಡಿಕೊಳ್ಳೋದ್ರಲ್ಲಿ ಕಾಲ ಕಳೀತಾಳೆ: ವಿಚ್ಛೇದನ ಸಿಗತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 16 =
Remember me
