ಬೆಂಗಳೂರು:ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರ ಹಿಂಪಡೆಯಬೇಕು ಎಂದು ಸರ್ಕಾರವನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿರುವ ಅಬಕಾರಿ ಇಲಾಖೆ ಆನ್​ಲೈನ್ ಮೂಲಕ ‘ಮನೆ ಬಾಗಿಲಿಗೆ ಮದ್ಯ’ ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್​ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ ಅಥವಾ ಚಿಂತನೆ ಕೈಬಿಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ. ಆನ್​ಲೈನ್ ಮೂಲಕ ಮದ್ಯ ಪೂರೈಸುವ ಸಂಬಂಧ ಖಾಸಗಿ ಕಂಪನಿ ಜತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಲಾಕ್​ಡೌನ್​ನಿಂದಾಗಿ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಮನೆ ಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರ ಕೈಬಿಡಬೇಕು ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + seven =
Remember me
