ಬೆಂಗಳೂರು:ಈ ವರ್ಷ ಶಾಲೆ ಆರಂಭವಾದರೂ ವಿದ್ಯಾರ್ಥಿಗಳಿಗೆ ಸೈಕಲ್ ಸಿಗೋದಿಲ್ಲ. ಶಾಲೆ ಆರಂಭದ ಅನಿಶ್ಚಿತತೆ ಮತ್ತು ಆಥಿರ್ಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ. ಇತ್ತೀಚಿಗೆ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ ಉನ್ನತ ಮಟ್ಟದ ಸಭೆಯಲ್ಲಿ ಈ ವಿಚಾರವನ್ನು ರ್ಚಚಿಸಲಾಯಿತು. ಈ ವೇಳೆ ಸಮವಸ್ತ್ರ, ಪಠ್ಯಪುಸ್ತಕ ನೀಡಿ ಸೈಕಲ್​ಗಳನ್ನು ಮುಂದಿನ ವರ್ಷ ನೀಡಲು ನಿರ್ಧಾರ ತೆಗೆದುಕೊಂಡಿದ್ದಾರೆ.
ಈಗಾಗಲೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸಮವಸ್ತ್ರಕ್ಕಾಗಿ ಟೆಂಡರ್ ಕರೆದು, ರಾಜ್ಯ ಸರ್ಕಾರ ಸ್ವಾಮ್ಯದ ಕಂಪನಿ ಕರ್ನಾಟಕ ಜವಳಿ ಅಭಿವೃದ್ಧಿ ನಿಗಮ(ಕೆಎಚ್​ಡಿಸಿ)ಮತ್ತು ಇತರೆ ಖಾಸಗಿ ಸಂಸ್ಥೆಗಳಿಗೆ ಕಾರ್ಯದೇಶವನ್ನು ಸಹ ನೀಡಿದೆ. ಆದರೆ, ಸೈಕಲ್ ಟೆಂಡರ್ ಪ್ರಕ್ರಿಯೆ ಆರಂಭಿಸಿರಲಿಲ್ಲ. ಈ ಬಾರಿ ಎಂದಿನಿಂದ ಶಾಲೆ ಆರಂಭಿಸುತ್ತೇವೆ ಎಂಬುದರ ಬಗ್ಗೆ ಇಲಾಖೆಗೆ ಸ್ಪಷ್ಟತೆ ಇಲ್ಲದಿರುವುದರಿಂದ ಸೈಕಲ್ ನೀಡದೇ ಇರುವುದು ಉತ್ತಮ ಎಂದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಬಜೆಟ್ ಎಷ್ಟು?:2019-20ನೇ ಸಾಲಿನಲ್ಲಿ ಬೈಸಿಕಲ್ ಖರೀದಿಗೆ 180 ಕೋಟಿ ರೂ. ವೆಚ್ಚ ಮಾಡಿತ್ತು. ಒಂದು ವೇಳೆ ಸೈಕಲ್ ಜತೆಗೆ ಶೂ ಮತ್ತು ಸಾಕ್ಸ್ ನೀಡುವುದನ್ನು ಸಹ ರದ್ದು ಮಾಡಿದರೆ, ರಾಜ್ಯ ಸರ್ಕಾರಕ್ಕೆ 300 ಕೋಟಿ ರೂ.ಗಳ ಉಳಿತಾಯವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 8 =
Remember me
