ಬೆಂಗಳೂರು:ಕೇಂದ್ರ ಸರ್ಕಾರ ಹೊರಡಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆಯನ್ನು ಪ್ರತಿಪಕ್ಷಗಳು ಅಧಿಕಾರದಲ್ಲಿರುವ ಬಹುತೇಕ ರಾಜ್ಯಗಳು ವಿರೋಧಿಸಿವೆ. ಕರ್ನಾಟಕದಲ್ಲಿಯೂ ಈ ಕಾಯ್ದೆ ಜಾರಿ ಬಗ್ಗೆ ಜನರಲ್ಲಿ ಕುತೂಹಲವಿದೆ.
ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದಲ್ಲಿಯೂ ಸಿಎಎ ಜಾರಿಯಾಗಲಿದೆಯೇ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಎ ಜಾರಿ ವಿಚಾರವಾಗಿ ಇನ್ನೂ ಏನೂ ಚರ್ಚೆ ಮಾಡಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡಿಕೊಳ್ಳಬೇಕು. ಆದರೆ ಬಿಜೆಪಿಯವರು ಅದನ್ನು ಬೇರೆ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಸುಮ್ಮನಿದ್ದು ಈಗ ಯಾಕೆ ಜಾರಿಗೆ ತಂದಿದ್ದಾರೆ? ರಾಜಕೀಯ ಲಾಭಕ್ಕಾಗಿ ಬಿಜೆಪಿ ಸಿಎಎ ಜಾರಿಗೊಳಿಸಿದೆ. ಮತ ದ್ರುವೀಕರಣದ ಉದ್ದೇಶ ಇದರ ಹಿಂದಿದೆ ಎಂದು ಆರೋಪಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
