ಬೆಂಗಳೂರು:2022-23ನೇ ಸಾಲಿನಿಂದಲೇ ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ/ ಮೌಲ್ಯಾಂಕನ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಅರ್ಧ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಈಗಾಗಲೆ ರಚನಾತ್ಮಕ ಮೌಲ್ಯಮಾಪನ (ಎಫ್​ಎ 1 ಮತ್ತು 2) ಹಾಗೂ ಸಂಕಲಾತ್ಮಕ ಮೌಲ್ಯಮಾಪನ (ಎಸ್​ಎ-1) ಪರೀಕ್ಷೆಗಳು ಮುಗಿದಿವೆ.
ಈ ಶೈಕ್ಷಣಿಕ ವರ್ಷ ವಾರ್ಷಿಕ ಪರೀಕ್ಷೆ ನಿರ್ವಹಿಸುವ ಬದಲಾಗಿ ಉಳಿದ ಅರ್ಧ ವರ್ಷಕ್ಕೆ ಸೀಮಿತಗೊಳಿಸಿ ಸಾಂಕೇತಿಕವಾಗಿ ನವೆಂಬರ್-2022ರಿಂದ ಮಾರ್ಚ್-2023ರ ಮೊದಲನೇ ವಾರದೊಳಗೆ ನಿರ್ವಹಿಸಿದ ಪಠ್ಯವಸ್ತು ಆಧರಿಸಿ ಎಸ್​ಎ-2 ಪರೀಕ್ಷೆಗೆ ಮಕ್ಕಳನ್ನು ತಯಾರು ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್. ವಿಶಾಲ್ ರಾಜ್ಯ ಪಠ್ಯಕ್ರಮ ಬೋಧಿಸುವ ಎಲ್ಲ ಶಾಲೆಗಳಿಗೆ ಸೂಚಿಸಿದ್ದಾರೆ.
ಮಾ.9ರಿಂದ ಪರೀಕ್ಷೆ:ಮಾ.9ರಿಂದ 17ರವರೆಗೆ ಪರೀಕ್ಷೆ ನಡೆಸಬೇಕು. ಏ.8ರಿಂದ 10ರೊಳಗೆ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಸಿ ಫಲಿತಾಂಶ ಪ್ರಕಟಿಸಬೇಕು. ಎಫ್​ಎ-1,2,3,4 ಮತ್ತು ಎಸ್​ಎ-1 ಮತ್ತು 2 ಅನ್ನು ಸೇರಿಸಿ 100 ಅಂಕಗಳಿಗೆ ಪರಿಗಣಿಸಿ ಶೇ.35 ಅಂಕ ಪಡೆದವರನ್ನು ‘ಕಲಿಕಾ ಪ್ರಗತಿ ಸಾಧಿಸಿದ ವಿದ್ಯಾರ್ಥಿ’ ಎಂದು ಪರಿಗಣಿಸಬೇಕು ಎಂದು ಸೂಚಿಸಲಾಗಿದೆ.
ಫೇಲ್ ಮಾಡುವಂತಿಲ್ಲ:ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟವಾದ ಎರಡು ತಿಂಗಳೊಳಗೆ ಪೂರಕ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಸುಧಾರಿಸಬೇಕು. ಬಳಿಕ ಮುಂದಿನ ತರಗತಿಗಳಿಗೆ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಅನುತ್ತೀರ್ಣ ಮಾಡುವಂತಿಲ್ಲ. ಈ ಮೊದಲು 7ನೇ ತರಗತಿಗೆ ನಡೆಸುತ್ತಿದ್ದ ಮೌಲ್ಯಾಂಕನ ಪರೀಕ್ಷೆ ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ.
ಆರ್​ಟಿಇ ಏನು ಹೇಳುತ್ತೆ?:ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 (ಆರ್​ಟಿಇ) ಪ್ರಕಾರ, ಯಾವುದೇ ಮಗುವು ಶಿಕ್ಷಣದಿಂದ ವಂಚಿರಾಗಬಾರದು. ಪ್ರತಿ ಶೈಕ್ಷಣಿಕ ವರ್ಷದ ಕೊನೆಯಲ್ಲಿ 5 ಮತ್ತು 8ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕು. ಮುಖ್ಯ ಪರೀಕ್ಷೆಯಲ್ಲಿ ಮಗುವು ಅನುತ್ತೀರ್ಣವಾದಲ್ಲಿ ಫಲಿತಾಂಶ ಪ್ರಕಟವಾದ 2 ತಿಂಗಳೊಳಗೆ ಪೂರಕ ಪರೀಕ್ಷೆ ನಡೆಸುವ ಮೂಲಕ ಮತ್ತೊಂದು ಅವಕಾಶ ಕಲ್ಪಿಸಬೇಕು. ಪೂರಕ ಪರೀಕ್ಷೆಯಲ್ಲಿಯೂ ಮಗುವು ವಿಫಲವಾದರೆ, ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೆ ಮಗುವನ್ನು ತಡೆಹಿಡಿಯದಿರಲು ಸರ್ಕಾರವು ಸೂಕ್ತ ಕ್ರಮ ವಹಿಸಬೇಕು.
5 ಮತ್ತು 8ನೇ ತರಗತಿ ಮಕ್ಕಳನ್ನು ಅನುತ್ತೀರ್ಣ ಮಾಡುತ್ತಿಲ್ಲ. ಬದಲಾಗಿ ಮಕ್ಕಳ ಕಲಿಕೆಯಲ್ಲಿ ಪ್ರಗತಿ ಸಾಧಿಸುವುದು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಅಣಿಗೊಳಿಸುವ ಉದ್ದೇಶ ಹೊಂದಲಾಗಿದೆ.
|ಡಾ. ಆರ್. ವಿಶಾಲ್, ಆಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ
ಕಲಿಕಾ ದೃಷ್ಟಿಯಿಂದ ಸರ್ಕಾರದ ನಿಯಮವನ್ನು ಸ್ವಾಗತಿಸುತ್ತೇವೆ. ಆದರೆ, ಈ ವರ್ಷಕ್ಕೆ ಅನ್ವಯ ಆಗುವಂತೆ ಪರೀಕ್ಷಾ ನಿಯಮ ಅಳವಡಿಸಿಕೊಳ್ಳಲು ಖಾಸಗಿ ಶಾಲೆಗಳಿಗೆ ಆಯ್ಕೆ ನೀಡಬೇಕು.
|ಡಿ. ಶಶಿಕುಮಾರ್ಕ್ಯಾಮ್ಸ್​ ಪ್ರಧಾನ ಕಾರ್ಯದರ್ಶಿ
ಶಿಕ್ಷಣ ಇಲಾಖೆ ಸುತ್ತೋಲೆ ಅವೈಜ್ಞಾನಿಕ ಹಾಗೂ ಶಿಕ್ಷಣದ ಮೂಲ ಉದ್ದೇಶಕ್ಕೆ ತದ್ವಿರುದ್ಧವಾಗಿದೆ. ಶಿಕ್ಷಣ ಎಂಬುದು ಕಲಿಕೆಗಾಗಿ ಕಲಿಸುವುದೇ ವಿನಾ, ಪರೀಕ್ಷೆಗಾಗಿ ಅಲ್ಲ. ಕೇಂದ್ರ ಹಾಗೂ ಇತರೆ ಪಠ್ಯಕ್ರಮ ಶಾಲೆಗಳಲ್ಲಿ ಇಲ್ಲದ ಪರೀಕ್ಷಾ ಪದ್ಧತಿ ಕೇವಲ ರಾಜ್ಯ ಪಠ್ಯಕ್ರಮ ಶಾಲೆಗಳಿಗೆ ಏಕೆ?
|ಲೋಕೇಶ್ ತಾಳಿಕಟ್ಟೆರುಪ್ಸಾ ಅಧ್ಯಕ್ಷ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 11 =
Remember me
