ಬೆಂಗಳೂರು:ಈ ವರ್ಷ ಶಾಲಾ ಶುಲ್ಕ ಕಟ್ಟದ ಮಕ್ಕಳನ್ನು ಮುಂದಿನ ವರ್ಷಕ್ಕೆ ಪಾಸ್ ಮಾಡಲ್ಲ ಎಂದು ಖಾಸಗಿ ಶಾಲೆಗಳು ಹೇಳುವಂತಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.
ಶಾಲಾ-ಕಾಲೇಜು ಆರಂಭ ಮಾಡಬೇಕೋ ಬೇಡವೋ ಎಂಬುದರ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.
ಈ ವರ್ಷ ಶಾಲೆ ಆರಂಭಿಸಲ್ಲ. ರಾಜ್ಯದಲ್ಲಿ ಡಿಸೆಂಬರ್​ವರೆಗೂ ಯಾವುದೇ ಶಾಲೆ-ಕಾಲೇಜು ಓಪನ್​ ಆಗಲ್ಲ ಎಂದರು. ಶಾಲೆ ಆರಂಭದ ಕುರಿತು ಡಿಸೆಂಬರ್‌ ಮೂರನೇ ವಾರದಲ್ಲಿ ಮತ್ತೊಂದು ಸಭೆ ನಡೆಯಲಿದೆ. ಪರಿಸ್ಥಿತಿ ನೋಡಿಕೊಂಡು ಮುಂದೆ ನಿರ್ಧಾರ ಮಾಡ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಸಚಿವರು, ಖಾಸಗಿ ಶಾಲೆಗಳ ಶುಲ್ಕ ವಸೂಲಿ ವಿಚಾರದ ಬಗ್ಗೆಯೂ ಮಾತನಾಡಿದರು.
ಸೆಕೆಂಡ್ ಟರ್ಮ್ ಫೀಸ್​ ಕಲೆಕ್ಟ್ ಮಾಡಲು ಖಾಸಗಿ ಶಾಲೆಗಳು ಅನುಮತಿ ಕೇಳಿವೆ. ಸರ್ಕಾರ ಇನ್ನೂ ಇನ್ನೂ ಅನುಮತಿ ಕೊಟ್ಟಿಲ್ಲ. ಫೀಸ್ ಕಲೆಕ್ಟ್ ಮಾಡಿದ ತಕ್ಷಣ ಮೊದಲ ಆಧ್ಯತೆ ಶಿಕ್ಷಕರ ವೇತನ ಕೊಡಲು. ಸ್ಕೂಲ್ ಫೀಸ್​ ಕಡಿಮೆ ಮಾಡುವ ವಿಚಾರದ ಅರ್ಜಿ ಕೋರ್ಟ್​ನಲ್ಲಿದೆ. ಈಗ ಅದರ ಬಗ್ಗೆ ಏನೂ ಹೇಳೋಕೆ ಆಗಲ್ಲ ಎಂದ ಸಚಿವರು, ಶುಲ್ಕ ಕಟ್ಟಿಲ್ಲ ಮಕ್ಕಳನ್ನು ಮುಂದಿನ ವರ್ಷಕ್ಕೆ ಪಾಸ್ ಮಾಡಲ್ಲ ಎಂದು ಖಾಸಗಿ ಶಾಲೆಗಳು ಹೇಳುವಂತಿಲ್ಲ. ಸರ್ಕಾರ ಈ ಬಗ್ಗೆ ಶೀಘ್ರವೇ ಒಂದು ನಿರ್ಧಾರ ಪ್ರಕಟಿಸಲಿದೆ ಎಂದು ವಿವರಿಸಿದರು.
ಮಹಾಮಾರಿ ಕರೊನಾ ಶಿಕ್ಷಣದ ಮೇಲೂ ಪರಿಣಾಮ ಬೀರಿದ್ದು, ದಿನದಿಂದ ದಿನಕ್ಕೆ ಸೋಂಕು ಉಲ್ಬಣಿಸುತ್ತಿದೆ. ಕರೊನಾ ನಿಯಂತ್ರಣಕ್ಕೆ ಬರುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಆನ್​ಲೈನ್​ ಮೂಲಕ ಮಕ್ಕಳಿಗೆ ತರಗತಿ ನಡೆಯುತ್ತಿದ್ದು, ಖಾಸಗಿ ಶಾಲೆಗಳಲ್ಲಿ ಈಗಾಗಲೇ ಮೊದಲ ಹಂತದ ಶಾಲಾ ಶುಲ್ಕ ಕಟ್ಟಿಸಿಕೊಳ್ಳಲಾಗಿದೆ.
ರಾಜ್ಯದಲ್ಲಿ ಈ ವರ್ಷ ಶಾಲೆ ಆರಂಭ ಇಲ್ಲ, ಮಹತ್ತರ ನಿರ್ಧಾರ ಕೈಗೊಂಡ ಸರ್ಕಾರ

ಸಿಎಂ ಯಡಿಯೂರಪ್ಪ ಅಧಿಕಾರಾವಧಿ ಪೂರ್ಣಗೊಳ್ಳುತ್ತಾ? ಇಲ್ಲಿದೆ ಕೋಡಿಮಠ ಸ್ವಾಮೀಜಿ ಉತ್ತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + thirteen =
Remember me
