ಬೆಂಗಳೂರು:ರಾಜ್ಯದಲ್ಲಿ ಇನ್ನುಮುಂದೆ ಹೊಸ ಬಿಪಿಎಲ್ ಕಾರ್ಡ್ ಸಿಗೋದಿಲ್ಲ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ  ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಶೇ.76.04 ನಗರ ಪ್ರದೇಶಗಳಲ್ಲಿ ಶೇ.49.36 ಸೇರಿ ಒಟ್ಟು 3,58,87,666 ಲಾನುಭವಿಗಳಿಗೆ 1,03,70,669 ಬಿಪಿಎಲ್ ಕಾರ್ಡ್ ನೀಡಬೇಕೆಂಬ ನಿಯಮವಿದೆ.
ಆದರೆ, ರಾಜ್ಯದಲ್ಲಿ ಸದ್ಯ 3,92,54,052 ಲಾನುಭವಿಗಳಿಗೆ 1,16,98,551 ರೇಷನ್ ಕಾರ್ಡ್‌ಗಳನ್ನು ನೀಡಲಾಗಿದೆ. ನಿಗದಿಗಿಂತ ಹೆಚ್ಚುವರಿಯಾಗಿ 13,27,882 ಬಿಪಿಎಲ್ ಕಾರ್ಡ್ ಈಗಾಗಲೇ ನೀಡಲಾಗಿದೆ. ಇದರಿಂದಾಗಿ ವರ್ಷದಿಂದ ವರ್ಷಕ್ಕೆ ಸರ್ಕಾರದ ಮೇಲೆ ಆರ್ಥಿಕ ಹೊರೆ ಬೀಳುತ್ತಿದೆ. ಹೀಗಾಗಿ, ಹೊಸ ಬಿಪಿಎಲ್ ಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಲು ಆಹಾರ ಇಲಾಖೆ ಚಿಂತಿಸಿದೆ. ಆದ್ದರಿಂದ, ಮುಂದಿನ ದಿನಗಳಲ್ಲಿ ಜನರಿಗೆ ಹೊಸ ಕಾರ್ಡ್‌ಗಳು ಸಿಗುವುದಿಲ್ಲ.
ರೇಷನ್ ಕಾರ್ಡ್‌ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ. ಸೆ.1ರಿಂದ ಸೆ.10ರವರೆಗೆ ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಓನ್ ಹಾಗೂ ಕರ್ನಾಟಕ ಓನ್ ಸೇರಿ ಇತರ ಕಡೆಗಳಲ್ಲಿ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಬಹುದು.
ಸಿಗದ ಅನುಮತಿರಾಜ್ಯದಲ್ಲಿ ಬಾಕಿ ಉಳಿದಿರುವ 2,95,986 ಅರ್ಜಿಗಳ ವಿಲೇಗೆ ಅನುಮತಿ ನೀಡುವಂತೆ ಆಹಾರ ಇಲಾಖೆ ಸರ್ಕಾರಕ್ಕೆ ಪತ್ರ ಬರೆದು ಎರಡು ತಿಂಗಳಾಗಿದೆ. ಆದರೂ ಇದುವರೆಗೂ ಇವುಗಳ ವಿಲೇಗೆ ಸರ್ಕಾರವು ಅನುಮತಿ ನೀಡಿಲ್ಲ. ಹಿಂದೆ ಹೊಸ ರೇಷನ್ ಕಾರ್ಡ್, ಸೇರ್ಪಡೆ, ತಿದ್ದುಪಡಿ ಕೋರಿ ಇದುವರೆಗೆ ಇಲಾಖೆಗೆ ಸಲ್ಲಿಕೆಯಾದ ಒಟ್ಟು 39,04,798 ಅರ್ಜಿಗಳ ಪೈಕಿ 26,48,171 ಅರ್ಜಿಗಳು ಅನುಮೋದನೆಗೊಂಡರೆ, 9,60,641 ಅರ್ಜಿಗಳು ತಿರಸ್ಕಾರಗೊಂಡಿತ್ತು. 36,08,812 ಅರ್ಜಿಗಳು ವಿಲೇವಾರಿಯಾದರೆ 2,95,986 ಅರ್ಜಿಗಳು ಹಲವು ತಿಂಗಳಿಂದ ಬಾಕಿ ಉಳಿದಿವೆ. ಮೇನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿತ್ತು. ಇದರಿಂದಾಗಿ ಪಡಿತರ ಚೀಟಿ ನೀಡಲು, ಸೇರ್ಪಡೆ, ತಿದ್ದುಪಡಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ ಬಾಕಿ ಅರ್ಜಿಗಳ ವಿಲೇವಾರಿಗೆ ಸರ್ಕಾರ ಅನುಮತಿ ಕೊಟ್ಟಿಲ್ಲ. ಹೀಗಾಗಿ, ಬಾಕಿ ಅರ್ಜಿಗಳ ವಿಲೇಗೆ ಇಲಾಖೆ, ಸರ್ಕಾರಕ್ಕೆ ಪತ್ರ ಬರೆದಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಹೊಸ ಬಿಪಿಎಲ್ ಕೋರಿ ಹೃದಯ ಸಮಸ್ಯೆ ಸೇರಿ ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರ ಸಾಕಷ್ಟು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಿಪಿಎಲ್ ಮುಖ್ಯವಾಗಿದೆ. ಇವರಿಗಾದರೂ ಕಾರ್ಡ್ ನೀಡಬೇಕಿದೆ.
ಇದನ್ನೂ ಓದಿ:ರಾಜಧಾನಿಯಲ್ಲಿ ಪಿಒಪಿ ಗಣಪತಿ ಮೂರ್ತಿ ನಿಷೇಧ
ಡಿಲೀಟ್ ಆಧಾರದಲ್ಲಿ ಕಾರ್ಡ್ ಮಂಜೂರುರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳು ಬಾಕಿ ಉಳಿದಿವೆ. ಇವುಗಳ ವಿಲೇವಾರಿಗೆ ಸರ್ಕಾರ ಯಾವಾಗ ಅನುಮತಿ ಕೊಡುತ್ತದೆ ಎಂಬುದರ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇಲ್ಲದಂತಾಗಿದೆ. ಒಂದು ವೇಳೆ ಅನುಮತಿ ಕೊಟ್ಟರೂ ‘ಅನರ್ಹರ ಪತ್ತೆ ಮೊದಲು; ಪಡಿತರ ಚೀಟಿ ವಿತರಣೆ ಆನಂತರ’ ಎಂಬ ಸೂತ್ರವನ್ನು ಇಲಾಖೆ ಅಳವಡಿಸಿಕೊಂಡು ಅರ್ಜಿಗಳನ್ನು ವಿಲೇವಾರಿ ಮಾಡಬೇಕಾಗುತ್ತದೆ. ಹಿಂದೆಮ್ಮೆ ಖೊಟ್ಟಿ ದಾಖಲೆ ಕೊಟ್ಟು ಆರ್ಥಿಕ ಸಬಲರು, ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿದ ಆಧಾರದ ಮೇಲೆ ಅರ್ಜಿಗಳನ್ನು ವಿಲೇವಾರಿ ಮಾಡಿದ ಬಳಿಕ ಹೊಸ ಕಾರ್ಡ್‌ಗಳನ್ನು ಮಂಜೂರು ಮಾಡಬೇಕಾಗುತ್ತದೆ.
ಅರ್ಜಿ ಪರಿಶೀಲಿಸಿರುವ ಇಲಾಖೆಹಿಂದಿನ ಬಿಜೆಪಿ ಸರ್ಕಾರವಿದ್ದಾಗ, ಬಾಕಿ ಉಳಿದಿರುವ ಅರ್ಜಿಗಳನ್ನು ನಿಗದಿಪಡಿಸಿದ ಮಾನದಂಡ ಆಧಾರದಲ್ಲಿ ಪರಿಶೀಲಿಸಬೇಕು. ಯಾವುದೇ ಅರ್ಜಿಯೂ ಅನರ್ಹವಾಗಿದ್ದಲ್ಲಿ ಅದನ್ನು ಎಪಿಎಲ್ ಕಾರ್ಡ್‌ಗೆ ಶಿಾರಸ್ಸು ಮಾಡಬೇಕು. ಪ್ರತಿ ಅರ್ಜಿ ಪರಿಶೀಲಿಸುವ ವೇಳೆ ಅರ್ಜಿದಾರರು ಜಂಟಿ ಕುಟುಂಬವೇ, ಜಂಟಿ ಕುಟುಂಬದಿಂದ ಪ್ರತ್ಯೇಕವಾಗಲು ಅರ್ಜಿ ಸಲ್ಲಿಸುವವರೇ, ಎಪಿಎಲ್ ಚೀಟಿ ಹೊಂದಿರುವವರೇ ಅಥವಾ ಈಗಾಗಲೇ ಯಾವುದಾದರೂ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅರ್ಜಿಗಳ ಅರ್ಹತೆ ಮತ್ತು ಅನರ್ಹತೆ ಬಗ್ಗೆ ಪರಿಶೀಲಿಸಬೇಕೆ ಹೊರತು ಹೊಸ ಕಾರ್ಡ್‌ನ್ನು ಮಂಜೂರು ಮಾಡಬಾರದು ಎಂದು ಆದೇಶಿಸಿತ್ತು. ಅದರಂತೆ, ಬಾಕಿ ಉಳಿದಿರುವ ಅರ್ಜಿಗಳನ್ನು ಮೇಲಿನ ನಿಯಮಗಳಂತೆ ಇಲಾಖೆ ಪರಿಶೀಲಿಸಿ ಮಂಜೂರಾತಿಗೆ ಸಿದ್ಧತೆ ಮಾಡಿಕೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
