ಬೆಂಗಳೂರು:ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-2020) ಅಬಾಧಿತವಾಗಿ ನಿಗದಿಯಂತೆ ನಡೆಯಲಿದೆ.
ಕೋವಿಡ್19 ಹರಡುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ಸಿಇಟಿ ಪರೀಕ್ಷೆ ನಿಗದಿಪಡಿಸಿ 2020ರ ಮೇ 13 ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ನಿರಾಕರಿಸಿದೆ.
ಇದನ್ನೂ ಓದಿ;ರಾಷ್ಟ್ರೀಯ ಶಿಕ್ಷಣ ನೀತಿ ಕೇಂದ್ರದೊಂದಿಗೆ ರಾಜ್ಯದಲ್ಲೂ ಜಾರಿಗೆ; ಸಚಿವ ಅಶ್ವತ್ಥನಾರಾಯಣ ಘೋಷಣೆ
ಈ ಮೂಲಕ ಜುಲೈ 30, 31 ಹಾಗೂ ಆಗಸ್ಟ್​ 1ರಂದು ನಿಗದಿಯಾಗಿದ್ದ ಪರೀಕ್ಷೆ ನಡೆಯುತ್ತೋ, ಇಲ್ಲವೋ ಎಂಬ ಬಗ್ಗೆ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕ ವಲಯದಲ್ಲಿದ್ದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.
ನಿನ್ನೆಯಷ್ಟೇ ಹೈಕೋರ್ಟ್​ ಸಿಇಟಿ ನಡೆಸುವ ಸಂಬಂಧ ಕೈಗೊಂಡಿರುವ ನಿರ್ಧಾರ ಮರು ಪರಿಶೀಲನೆಗೆ ಸೂಚಿಸಿತ್ತು. ಹೀಗಾಗಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಉನ್ನತ ಮಟ್ಟದ ತುರ್ತುಸಭೆ ನಡೆಸಿದ್ದರು.
ಇದನ್ನೂ ಓದಿ;ಉತ್ತಮ ಆಡಳಿತ ವ್ಯವಸ್ಥೆ-ನಿರ್ವಹಣೆ ಶಾಲೆಗಳಿಗೆ ಸಿಗಲಿದೆ ರಾಜ್ಯಮಟ್ಟದ ‘ಸ್ವಾಭಿಮಾನಿ ಸರ್ಕಾರಿ ಶಾಲೆ’ ಪ್ರಶಸ್ತಿ
ಎಲ್ಲ ಜಿಲ್ಲೆ, ಗಡಿನಾಡಿನಲ್ಲೂ ಪರೀಕ್ಷೆ ನಡೆಸಲು ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೈಗೊಳ್ಳಲಾದ ರೀತಿಯಲ್ಲಿಯೇ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ಆರೋಗ್ಯ, ಸಾರಿಗೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳೆಲ್ಲರೂ ಪರೀಕ್ಷೆ ನಡೆಸುವುದಕ್ಕೆ ಸಮಸ್ಯೆ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದನ್ನೇ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗಿತ್ತು.
ಎಂಫಿಲ್​ ರದ್ದು, ಪದವಿ ಶಿಕ್ಷಣ ಸ್ವರೂಪದಲ್ಲಿ ಬದಲಾವಣೆ; ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಏನೇನಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + twenty =
Remember me
