ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಸರ್ಕಾರ ಸೂಕ್ತ ಸಮಯದಲ್ಲಿ ಅಗತ್ಯ ಕ್ರಮ ಕೈಗೊಳ್ಳದಿದ್ದ ಕಾರಣ ಗಲಭೆ ನಡೆದಿದ್ದು, ಇದೀಗ ಊಹಾಪೋಹ ಸೃಷ್ಟಿಸಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರಿದ್ದಾರೆ.
ಪ್ರಸನ್ನಕುಮಾರ್ ಪಕ್ಷಕ್ಕೆ ಮರಳುವ ಬಗ್ಗೆ ಬಹಳ ದಿನದಿಂದ ಅರ್ಜಿ ಹಾಕಿದ್ದಾರೆ. ಆ ವಿಚಾರ ನಿರ್ಧರಿಸಲು ಪರಿಶೀಲನಾ ಸಮಿತಿ ಇದೆ. ಶ್ರೀನಿವಾಸ ಮೂರ್ತಿ 70 ಸಾವಿರ ಮತಗಳಿಂದ ಗೆದ್ದಿದ್ದಾರೆ. ಅಭ್ಯರ್ಥಿ ಬದಲಾವಣೆ ಮಾಡುವ ಉದ್ದೇಶ ಇಲ್ಲ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.ನಾನು ಅಖಂಡ ಜತೆ ಮಾತನಾಡಿದ್ದು, ಪ್ರಸನ್ನಕುಮಾರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಅಭ್ಯಂತರ ಇಲ್ಲ ಎಂದಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ವಿಶ್ವಗುರು: ಡಿಜೆ ಹಳ್ಳಿ ಗಲಭೆ, ಅನೇಕ ಪ್ರಶ್ನೆಗಳು!
ಸರಳ ಆಚರಣೆ:ಆ. 20ರಂದು ರಾಜೀವ್ ಗಾಂಧಿ ಜನ್ಮದಿನವಾಗಿದ್ದು, ಪ್ರತಿವರ್ಷ ತಮಿಳುನಾಡಿನ ಪೆರಂಬದೂರ್​ನಿಂದ ವಿವಿಧ ನಗರಗಳ ಮೂಲಕ ನವದೆಹಲಿವರೆಗೂ ಸದ್ಭಾವನಾ ಜ್ಯೋತಿ ಯಾತ್ರೆ ನಡೆಸುವ ಪದಟಛಿತಿಯನ್ನು ಕಾಂಗ್ರೆಸ್ ಹಮ್ಮಿಕೊಳ್ಳುತ್ತಿದೆ. ಈ ಬಾರಿ ಕರೊನಾ ಕಾರಣ ಸರಳವಾಗಿ ಜ್ಯೋತಿಯನ್ನು ಸ್ವಾಗತಿಸಲಾಗುವುದು ಎಂದರು. ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಜನ್ಮದಿನ ಹಿನ್ನೆಲೆಯಲ್ಲಿ 20ರಂದು ‘ಜನಧ್ವನಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
VIDEO:ಅಡುಗೆ ಸಾಮಾನು ತರೋದಕ್ಕೆ ಹೋಗಿದ್ರಂತೆ ಡಿಜೆಹಳ್ಳಿ ಗಲಭೆ ಆರೋಪಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + fifteen =
Remember me
