ಬೆಂಗಳೂರು:ಕಳೆದ ಹದಿಮೂರು ವರ್ಷಗಳಿಂದ ನಿರಂತರವಾಗಿ ದೆಹಲಿಯಲ್ಲಿ ಜ.26 ಗಣರಾಜ್ಯೋತ್ಸವದಂದು ನಡೆಯುವ ಸ್ತಬ್ಧ ಚಿತ್ರ ಪರೇಡ್​ನಲ್ಲಿ ಕರ್ನಾಟಕ ಪ್ರತಿನಿಧಿಸುತ್ತಾ ಬರುತ್ತಿತ್ತು. ಆದರೆ ಈ ವರ್ಷದ ಪರೇಡ್​ನಲ್ಲಿ ಭಾಗವಹಿಸುವ ಅವಕಾಶವನ್ನು ಕರ್ನಾಟಕ ಕಳೆದುಕೊಂಡಿದೆ.
ಈ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹರ್ಷ ಮಾಹಿತಿ ನೀಡಿದ್ದು, ಬೇರೆ ರಾಜ್ಯಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡಿಲ್ಲ ಎಂದು ಹೇಳಿದ್ದಾರೆ.
ಕಳೆದ ಬಾರಿ ರಾಜ್ಯದ ಸ್ತಬ್ಧ ಚಿತ್ರ ದ್ವಿತೀಯ ಬಹುಮಾನ ಪಡೆದುಕೊಂಡಿತ್ತು. ಈ ಬಾರಿ ಮಹಿಳಾ ಸಬಲೀಕರಣದ ವಿಷಯವನ್ನಿಟ್ಟುಕೊಂಡು ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದೆವು. ಆದರೆ ಅಂತಿಮವಾಗಿ ರಾಜ್ಯಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಕೇಂದ್ರದಿಂದ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಿದರು.
ಈ ಬಾರಿಯ ಗಣರಾಜ್ಯೋತ್ಸವ ಪರೇಡ್​​ನ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇರಳ, ತಮಿಳು ನಾಡು ಸೇರಿದಂತೆ 13 ರಾಜ್ಯಗಳನ್ನು ಆಯ್ಕೆ ಮಾಡಲಾಗಿದೆ. ಈ ಬಾರಿ ಮಹಿಳಾ ಸಬಲೀಕರಣವನ್ನು ಸಾರುವ ನಿಟ್ಟಿನಲ್ಲಿ ಒಟ್ಟು ನಾಲ್ಕು ವಿಷಯಗಳನ್ನು ರಾಜ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟಿತ್ತು. ಸಾಲುಮರದ ತಿಮ್ಮಕ್ಕ ಹಾಗೂ ಸೂಲಗಿತ್ತಿ ನರಸಮ್ಮ ಅವರ ಸ್ತಬ್ಧ ಚಿತ್ರ ಅಂತಿಮವಾಗಿ, ಸ್ತಬ್ಧಚಿತ್ರ ಕಲ್ಪನೆಗೆ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಆದರೆ ಅಂತಿಮ ಹಂತದ ಸಭೆಯಲ್ಲಿ ಕರ್ನಾಟಕ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ ಆಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
