ಬೆಂಗಳೂರು:ಕರೊನಾ ನಿಯಂತ್ರಿಸುವ ಜತೆಗೆ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದು, ಈ ವಿಚಾರದಲ್ಲಿ ಸಂಪುಟ ಸದಸ್ಯರು ಇನ್ನಷ್ಟು ‘ಆಕ್ರಮಣಕಾರಿ’ಯಾಗುವಂತೆ ತಾಕೀತು ಮಾಡಿದ್ದಾರೆ. ಬೆಂಗಳೂರಿನಲ್ಲಿ ಮತ್ತೆ ಲಾಕ್​ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ಸ್ವತಃ ‘ಸೂಕ್ಷ್ಮ ಮೇಲ್ವಿಚಾರಣೆ’ ನಡೆಸಲು ನಿರ್ಧರಿಸಿದ್ದಾರೆ.
ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ ಸಚಿವರು, ಗೃಹ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಜತೆ ಸೋಮವಾರ 2 ತಾಸು ಸಭೆ ನಡೆಸಿದ ಸಿಎಂ, ಪ್ರತಿಯೊಬ್ಬರಿಂದ ಮಾಹಿತಿ ಪಡೆದುಕೊಂಡರು. ಬುಧ ವಾರದಿಂದ ಲಾಕ್​ಡೌನ್ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
3648 ಹೊಸ ಪ್ರಕರಣಗಳು:ರಾಜ್ಯದಲ್ಲಿ ಕರೊನಾ ಅಬ್ಬರ ಮುಂದುವರಿದಿದ್ದು, ಸೋಮವಾರ 3648 ಹೊಸ ಪ್ರಕರಣ ಬೆಳಕಿಗೆ ಬಂದಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 67,420ಕ್ಕೆ ಏರಿಕೆಯಾಗಿದೆ. 42,216 ಸಕ್ರಿಯ ಪ್ರಕರಣಗಳಿವೆ. ಈ ಮಧ್ಯೆ, ಭಾನುವಾರ ದೇಶದಲ್ಲಿ 40 ಸಾವಿರಕ್ಕೂ ಅಧಿಕ ಪ್ರಕರಣ ದೃಢಪಟ್ಟಿವೆ.
ಬೆಂಗಳೂರಿನಲ್ಲಿ ಇಳಿಮುಖವಾದ ಕೋವಿಡ್​ ಕೇಸ್​; ಮರಣ ಪ್ರಮಾಣವೂ ಕುಸಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − thirteen =
Remember me
