ಬೆಂಗಳೂರು:ಬಾಕಿ ಬಿಲ್ ಪಾವತಿ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆತಂಕ ಪಡುವ ಅಗತ್ಯವಿಲ್ಲ. ಏನಾದರೂ ಇದ್ದರೆ ಬಂದು ನಮ್ಮ ಬಳಿ ಮಾತನಾಡಲಿ. ನಾವು ನ್ಯಾಯ ಒದಗಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಭಯ ನೀಡಿದ್ದಾರೆ.ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ‘ನಮ್ಮ ಪರಿಸ್ಥಿತಿ ರೈತರಿಗಿಂತ ಶೋಚನೀಯವಾಗಿದೆ. ತನಿಖೆ ಪಕ್ಕಕ್ಕಿಟ್ಟು ಬಿಲ್ ಪಾವತಿ ಮಾಡಲಿ’ ಎಂದು ಸರ್ಕಾರಕ್ಕೆ ಮನವಿ ಮಾಡಿರುವ ಕುರಿತು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕೆಂಪಣ್ಣ ಅವರ ಮನವಿ ಮೇರೆಗೆ ನಾವು ತನಿಖೆ ಪಕ್ಕಕ್ಕಿಟ್ಟು, ಆದ್ಯತೆ ಮೇರೆಗೆ ಕಾಮಗಾರಿಗಳ ಶೇ.60-70 ಹಣ ಬಿಡುಗಡೆ ಮಾಡಿದ್ದೇವೆ. ಬಿಲ್ ಪಾವತಿ ಸಮಯದಲ್ಲಿ ಜಿಎಸ್‌ಟಿ ಕೂಡ ಪಾವತಿ ಮಾಡಬೇಕು ಹೀಗಾಗಿ ತನಿಖೆ ವರದಿ ಬರುವ ಮುನ್ನವೇ ನಾವು ಸುಮಾರು ಮುಕ್ಕಾಲು ಭಾಗ ಹಣ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.ಕೆಂಪಣ್ಣ ಸಚಿವರ ವಿರುದ್ಧ ಆರೋಪ ಮಾಡುತ್ತಿಲ್ಲ ಕೇವಲ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, ಈ ಬಗ್ಗೆ ನಮಗೆ ಮಾಹಿತಿ ಇಲ್ಲ. ಸರಿಯಾದ ತನಿಖೆ ನಡೆಯುವವರೆಗೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.ಲೋಡ್ ಶೆಡ್ಡಿಂಗ್ ವಿಚಾರವಾಗಿ ಮಾತನಾಡಿ, ನಾವು ಅಧಿಕಾದಲ್ಲಿ ಇದ್ದಾಗ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು, ಬಿಜೆಪಿ ಅವರ ಅವಧಿಯಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಆಗಿದೆ ಎಂಬ ಮಾಹಿತಿ ನನ್ನ ಬಳಿ ಇದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − eight =
Remember me
