ಬೆಂಗಳೂರು:ಮತ್ತೆ ಲಾಕ್‌ಡೌನ್‌ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಈಗಿನ ಸಂದರ್ಭದಕ್ಕೆ ಅದು ಸರಿ ಹೊಂದುವುದೂ ಇಲ್ಲ. ಹೊರಗಿನಿಂದ ಬೆಂಗಳೂರಿಗೆ ಬರುತ್ತಿರುವ ಪ್ರತಿಯೊಬ್ಬರೂ ಕೋವಿಡ್‌ ತಪಾಸಣೆಗೆ ಒಳಗಾಗಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಬುಧವಾರ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ʼಡಾ.ಅಂಬೇಡ್ಕರ್‌ ಜಯಂತಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಗಾರರ ಜತೆ ಅವರು ಮಾತನಾಡಿದರು.
ವೈಯಕ್ತಿಕವಾಗಿ ಲಾಕ್‌ಡೌನ್‌ ಬೇಡ ಎಂತಲೇ ಹೇಳುತ್ತೇನೆ. ಸಮಾಜದಲ್ಲಿ ಯಾರೊಬ್ಬರಿಗೂ ಲಾಕ್‌ಡೌನ್‌ ತಡೆದುಕೊಳ್ಳುವ ಶಕ್ತಿ ಇಲ್ಲ. ಜೀವ ಉಳಿಯುವುದರ ಜತೆಗೆ ಜೀವನವೂ ನಡೆಯಬೇಕು. ಕಳೆದ ಒಂದು ವರ್ಷದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮತ್ತೆ ಸಂಕಷ್ಟಕ್ಕೆ ಸಿಲುಕುವುದು ಬೇಡ ಎಂದರು ಡಿಸಿಎಂ.
ಇದನ್ನೂ ಓದಿ:ಸಿಬಿಎಸ್​ಇ : 12 ನೇ ತರಗತಿ ಪರೀಕ್ಷೆ ಮುಂದಕ್ಕೆ, 10ನೇ ತರಗತಿ ಪರೀಕ್ಷೆ ರದ್ದು
ಎಲ್ಲ ಕಡೆ ಕೋವಿಡ್‌ ಉಚಿತ ತಪಾಸಣೆ ನಡೆಯುತ್ತಿದೆ. ಒಂದು ನಯಾಪೈಸೆಯನ್ನೂ ಖರ್ಚು ಮಾಡಬೇಕಾಗಿಲ್ಲ. ಹೊರಗಿನಿಂದ ನಗರಕ್ಕೆ ಯಾರಾದರೂ ಬಂದರೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾರೂ ಉಪೇಕ್ಷೆ ಮಾಡಬಾರದು. ಕೋವಿಡ್‌ ಲಕ್ಷಣಗಳೇನಾದರೂ ಕಂಡು ಬಂದರೆ ಅದನ್ನು ಕಡೆಗಣಿಸೋದು ಬೇಡ ಎಂದು ಅವರು ತಿಳಿಸಿದರು.
ಯಾರೂ ಸೂಪರ್‌ಮ್ಯಾನ್‌ ಅಲ್ಲ :ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದ ಅಶ್ವತ್ಥನಾರಾಯಣ, “ನನಗೇನೂ ಆಗಿಲ್ಲ. ನಾನು ಚೆನ್ನಾಗಿದ್ದೇನೆ. ಗಟ್ಟಿಮುಟ್ಟಾಗಿದ್ದೇನೆ ಎಂಬ ಅತಿ ಆತ್ಮವಿಶ್ವಾಸ ಯಾರಿಗೂ ಬೇಡ. ಯಾರೂ ಕೂಡ ಸೂಪರ್‌ಮ್ಯಾನ್‌ ಅಲ್ಲ. ಇದನ್ನು ಎಲ್ಲರೂ ನೆನಪಲ್ಲಿ ಇಟ್ಟುಕೊಳ್ಳಬೇಕು. ಉಚಿತವಾಗಿ ಸಿಗುತ್ತಿರುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕು” ಎಂದು ಡಿಸಿಎಂ ಕಿವಿಮಾತು ಹೇಳಿದರು.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​​ಗೆ ಕರೊನಾ ಪಾಸಿಟೀವ್

ಬಿಜೆಪಿ ಲಸಿಕೆ ಹಾಕಿಸಿಕೊಳ್ಳಲ್ಲ ಎಂದ ಮಾಜಿ ಸಿಎಂಗೆ ಕರೊನಾ ಪಾಸಿಟಿವ್‌- ಟ್ವೀಟ್‌ ಮೂಲಕ ಹೀಗೆ ಹೇಳಿದ್ರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
