ಬೆಂಗಳೂರು:ದೇಶಾದ್ಯಂತ ಕರೊನಾ ಮಟ್ಟ ಹಾಕಲು, ಇನ್ನೊಬ್ಬರಿಗೆ ಹರಡದಂತೆ ನಿಯಂತ್ರಿಸಲು ಆಯಾ ರಾಜ್ಯಗಳು ಭಾರಿ ಶ್ರಮವಹಿಸುತ್ತಿವೆ. ಲಾಕ್​ಡೌನ್​ ಹೊರತಾಗಿಯೂ ಜಿಲ್ಲಾಮಟ್ಟದಲ್ಲಿ ಕೈಗೊಳ್ಳುತ್ತಿರುವ ಕ್ರಮಗಳು ಫಲ ನೀಡುತ್ತಿವೆ.
ಕರೊನಾ ಸೋಂಕಿತರ ಸಂಖ್ಯೆ ಹಾಗೂ ಹೊಸ ಪ್ರಕರಣಗಳು ವರದಿಯಾಗುತ್ತಿರುವ ಆಧಾರದಲ್ಲಿ ಆಯಾ ಪ್ರದೇಗಳನ್ನು ವಿವಿಧ ವಲಯಗಳಾಗಿ ವಿಂಗಡಿಸಲಾಗುತ್ತಿದೆ. ಅಂತೆಯೇ 15ಕ್ಕಿಂತ ಹೆಚ್ಚು ಪ್ರಕರಣಗಳಿರುವ ಪ್ರದೇಶವನ್ನು ಕೆಂಪು ವಲಯ ಎಂದು ಕರೆಯಲಾಗಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳು ಈ ವಲಯದಲ್ಲಿವೆ. ಇದಕ್ಕಿಂತ ಕಡಿಮೆ ಪ್ರಕರಣಗಳಿರುವುದನ್ನು ಕಿತ್ತಲೆ ವಲಯ ಎಂದು ಕರೆಯಲಾಗಿದೆ. ಗದಗ, ಉತ್ತರಕನ್ನಡ, ಉಡುಪಿ, ಬೀದರ್​, ದಕ್ಷಿಣಕನ್ನಡ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ ಧಾರವಾಡಗಳು ಈ ವ್ಯಾಪ್ತಿಗೆ ಬರುತ್ತವೆ.
ಇನ್ನೂ ಒಂದು ಪ್ರಕರಣಗಳಿಲ್ಲದ ಜಿಲ್ಲೆಯನ್ನು ಹಸಿರು ವಲಯ ಎಂದು ವಿಂಗಡಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳು ಈ ವಲಯದಲ್ಲಿ ಗುರುತಿಸಲ್ಪಟ್ಟಿವೆ.
ಹಾವೇರಿ, ಚಾಮರಾಜನಗರ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಆರಂಭದಿಂದಲೂ ಒಂದೂ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಕೊಡಗು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಕಳೆದ 28 ದಿನಗಳಿಂದ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕೊಡಗು ಆರಂಭದಿಂದಲೂ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದರರ್ಥ ಸೋಂಕು ವ್ಯಾಪಿಸುವುದ್ನು ತಡೆಗಟ್ಟಲು ಈ ಜಿಲ್ಲೆಗಳು ಅತ್ಯಂತ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.
ದೇಶದಲ್ಲಿ ಇಂಥ 16 ಜಿಲ್ಲೆಗಳಿದ್ದು, ರಾಜ್ಯದ ಮೂರು ಇದರಲ್ಲಿ ಸ್ಥಾನಪಡೆದಿವೆ. ಚತ್ತೀಸಗಢ್​ದಲ್ಲಿ 3, ಬಿಹಾರ, ಗೋವಾ, ಮಣಿಪುರ, ಮಿಜೋರಾಂ, ಮಹಾರಾಷ್ಟ್ರ, ಪುದುಚೇರಿ, ರಾಜಸ್ಥಾನ, ತೆಲಂಗಾಣ, ಉತ್ತರಾಖಂಡ್​ನ ತಲಾ ಒಂದು ಜಿಲ್ಲೆಗಳು ಈ ಪಟ್ಟಿಯಲ್ಲಿವೆ.
‘ಚೀನಾ ಮಾಲು’ ಬಳಸಬೇಡಿ; ಆಸ್ಪತ್ರೆಗಳಿಗೆ ಸೂಚನೆ ನೀಡಿದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × one =
Remember me
