ಬೆಂಗಳೂರು:ಬ್ರಿಟನ್​ನಲ್ಲಿ ರೂಪಾಂತರಿತ ಕರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜನವರಿ 2 ರ ತನಕ ನೈಟ್ ಕರ್ಫ್ಯೂ ಎಂದು ಸರ್ಕಾರ ಘೋಷಿಸಿತ್ತು. ಇದಕ್ಕೂ ಮೊದಲು ನಿನ್ನೆಯಿಂದಲೇ ಜಾರಿ ಎಂದಿತ್ತಾದರೂ, ಬಳಿಕ ಅದರಿಂದ ಹಿಂದೆ ಸರಿದಿತ್ತು. ಇಂದು ಮತ್ತೆ ನಿನ್ನೆಯ ತೀರ್ಮಾನದಿಂದಲೂ ಹಿಂದೆ ಸರಿದಿರುವ ರಾಜ್ಯ ಸರ್ಕಾರ, ನೈಟ್​ ಕರ್ಫ್ಯೂ ಇರಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿರುವುದಿಷ್ಟು – ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ಸಂಪಾದಕೀಯ | ತೊಡಕು ಸೃಷ್ಟಿಸದಿರಲಿ – ಮುನ್ನೆಚ್ಚರಿಕೆ ಅಗತ್ಯ, ಆತಂಕ ಬೇಡ
ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಸರ್ಕಾರದ ನೈಟ್ ಕರ್ಫ್ಯೂ ನಿರ್ಧಾರದ ಬಗ್ಗೆ ಜನರು ಮುಸಿ ಮುಸಿ ನಗುತ್ತಿದ್ದಾರೆ: ಬಿಜೆಪಿ ನಾಯಕನಿಂದಲೇ ಟೀಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 3 =
Remember me
