ಬೆಂಗಳೂರು:ನಮ್ಮ ಪಕ್ಷದಿಂದ ಒಬ್ಬೇ ಒಬ್ಬ ಶಾಸಕ, ಮಾಜಿ ಶಾಸಕರು ಕಾಂಗ್ರೆಸ್‌ಗೆ ಹೋಗುವುದಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ನೂತನ ಅಧ್ಯಕ್ಷ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದರು.
ಜೆಡಿಎಸ್-ಬಿಜೆಪಿಯ 15 ಶಾಸಕರು, ಮಾಜಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂಬ ಸಚಿವ ಚೆಲುವರಾಯ ಸ್ವಾಮಿ ಹೇಳಿಕೆಗೆ ಜೆ.ಪಿ.ಭವನದಲ್ಲಿ ಪ್ರತಿಕ್ರಿಯಿಸಿದ ಅವರು, ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಶಾಸಕರಾಗಿರುವುದೇ ನಾನು, ನನ್ನ ಮಗ. ನಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಯಾವುದೇ ಸ್ಥಾನ ಖಾಲಿ ಇಲ್ಲ. ಹೀಗಾಗಿ ಯಾವ ಶಾಸಕರು ಹೋಗುತ್ತಾರೆ? ಹೋದವರಿಗೆ ಏನು ಸ್ಥಾನ ಕೊಡುತ್ತಾರೆ? ಬೇರೆಯವರನ್ನು ಕರೆದುಕೊಂಡರೆ ಅಲ್ಲಿರುವವರು ಬಿಟ್ಟು ಹೊಗುತ್ತಾರೆ ಎಂದು ಹೇಳಿದರು.ವಿಧಾನಸಭೆ ಚುನಾವಣೆಯಲ್ಲಿ ಬೇರೆ ಪಕ್ಷದಲ್ಲಿ ಟಿಕೆಟ್ ಸಿಗದವರು ನಮ್ಮ ಪಕ್ಷಕ್ಕೆ ಬಂದು ಸ್ಪರ್ಧಿಸಿರುವ ಮುಖಂಡರನ್ನು ನಮ್ಮ ಪಕ್ಷದಲ್ಲೇ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ.
ಕುಮಾರ ಸ್ವಾಮಿಯವರೊಬ್ಬರಿಂದಲೇ ಪಕ್ಷ ಕಟ್ಟಲು ಆಗುವುದಿಲ್ಲ. ನೀವೆಲ್ಲ ನಮ್ಮ ಜತೆ ಇರಬೇಕು ಎಂದು ದೇವೆಗೌಡರೇ ಹೇಳಿದ್ದಾರೆ. ಎಲ್ಲರೂ ನಮ್ಮ ಜತೆ ಇರುತ್ತಾರೆ ಎಂದು ದೇವೇಗೌಡ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − three =
Remember me
