ಬೆಂಗಳೂರು:ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾ ಕುಂದಾಪುರ ಮತ್ತಿತರ ಆರೋಪಿಗಳು ಸಿಕ್ಕಿಬಿದ್ದಿರುವ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆ ಆಗಿದೆ.
ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಕಾಂಗ್ರೆಸ್​ ಬೆಂಬಲಿಗರು ಅವರನ್ನು ಟ್ರೋಲ್ ಮಾಡಲು ಆರಂಭಿಸಿದ್ದು, ಇದೀಗ ಕಾಂಗ್ರೆಸ್ ನಾಯಕರು ಕೂಡ ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ಗುರಿಯಾಗಿಸಿ ಟೀಕಿಸಲು ಆರಂಭಿಸಿದ್ದಾರೆ. ಒಬ್ಬ ವ್ಯಕ್ತಿ ಮೋಸ ಹೋಗಿದ್ದಾರೆ ಎನ್ನಲಾದ ಪ್ರಕರಣ ಇದೀಗ ರಾಜಕೀಯ ಜಿದ್ದಾಜಿದ್ದಿನ ಸಂಗತಿಯಾಗಿ ಪರಿಣಮಿಸಿದೆ.
ಇದನ್ನೂ ಓದಿ:ಸಿಸಿಬಿ ಪೊಲೀಸರು, ನ್ಯಾಯಾಧೀಶರ ಮುಂದೆಯೂ ಕಣ್ಣೀರಿಟ್ಟ ಚೈತ್ರಾ ಕುಂದಾಪುರ ಹೇಳಿದ್ದೇನು?
ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಎಂದು ಪ್ರಶ್ನಿಸಿರುವ ಕೆಪಿಸಿಸಿ, “ಸಿಎಂ ಹುದ್ದೆಗೆ 2,500 ಕೋಟಿ, ಮಂತ್ರಿಗಿರಿಗೆ 70 – 80 ಕೋಟಿ, MLA ಟಿಕೆಟ್​ಗೆ 7 ಕೋಟಿ!! ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು. ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ!” ಎಂದು ಕಾಲೆಳೆದಿದ್ದಾರೆ. ಮಾತ್ರವಲ್ಲ, ಈ ಮಾರಾಟದ ಆಟದಲ್ಲಿ “ವಿರೋಧ ಪಕ್ಷದ ನಾಯಕ”ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ? ಎಂದು ಬಿಜೆಪಿಯವರನ್ನು ಉದ್ದೇಶಿಸಿ ಕರ್ನಾಟಕ ಕಾಂಗ್ರೆಸ್​ ಹ್ಯಾಂಡಲ್​ನಿಂದ ಎಕ್ಸ್ ಮಾಡಲಾಗಿದೆ.
ಪಿಒಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ; ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ

ದೇಶದಲ್ಲಿ ಹೊಸ ಆತಂಕ: ನಿಫಾ ವೈರಸ್​ಗೆ ಪಕ್ಕದ ಕೇರಳದಲ್ಲೇ ಇಬ್ಬರು ಬಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 3 =
Remember me
