ಬೆಂಗಳೂರುಶಾಲಾ ಶಿಕ್ಷಣ ಇಲಾಖೆಯು ಹೊಸದಾಗಿ ಆರಂಭಿಸಲು ಹೊರಟಿರುವ 3 ಸಾವಿರ ಆಂಗ್ಲ ಮಾಧ್ಯಮ ಶಾಲೆಗಳ ಆದೇಶವನ್ನು ವಾಪಸ್ ಪಡೆಯಬೇಕು. ಅದಕ್ಕೂ ಮೊದಲು ಮಾತೃಭಾಷಾ ಶಿಕ್ಷಣಕ್ಕೆ ಇರುವ ಕಾನೂನು ತೊಡಕುಗಳನ್ನು ನಿವಾರಣೆ ಮಾಡಿಕೊಳ್ಳಲು ರಾಜ್ಯ ಸರ್ಕಾವು ಆಸಕ್ತಿ ವಹಿಸಬೇಕಿದೆ ಎಂದು ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ಆಗ್ರಹಿಸಿದ್ದಾರೆ.
ಮಕ್ಕಳ ಬೆಳವಣಿಗೆಯಲ್ಲಿ ಆರಂಭಿಕ ಕಲಿಕೆ ಮತ್ತು ಕಲಿಕೆಯ ಭಾಷೆ ನಿರ್ಣಾಯಕ ಪಾತ್ರ ವಹಿಸಲಿದೆ. ಮುಖ್ಯವಾಗಿ ಕಲಿಕೆಯು ಮಾತೃಭಾಷೆಯಲ್ಲಿರಬೇಕು. ಮಗುವಿಗೆ ಗೊತ್ತಿರುವ ಭಾಷೆಯಲ್ಲಿ ಕಲಿಸಿದರೆ ಬೌದ್ಧಿಕ ಬೆಳವಣಿಗೆ ಸಾಧ್ಯವಾಗಲಿದೆ. ಮಗುವು ಕಂಠಪಾಠಕ್ಕೆ ಜೋತು ಬೀಳುವುದಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಗಾಂಧಿ ಭವನದಲ್ಲಿ ಬುಧವಾರ ಆಯೋಜಿಸಿದ್ದ ಚರ್ಚೆಯಲ್ಲಿ ಮಾತನಾಡಿದ ಜಿ. ರಾಮಕೃಷ್ಣ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗುತ್ತಿದೆ ಎಂಬುದು ಮುಖ್ಯವಲ್ಲ. ದೆಹಲಿ ಶಾಲೆಗಳಲ್ಲಿಯೂ ರಾಜ್ಯದ ಪರಿಸ್ಥಿತಿಯೇ ಇತ್ತು. ಆದರೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದೆ. ರಾಜ್ಯದಲ್ಲಿಯೂ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ, ಶಿಕ್ಷಕರ ನೇಮಕಾತಿಗೆ ಒತ್ತು ನೀಡಿದರೆ ಖಂಡಿತವಾಗಿಯೂ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಕೊರತೆ ಎದುರಾಗುವುದಿಲ್ಲ ಎಂದು ಹೇಳಿದರು.
ಸರ್ಕಾರದಲ್ಲಿರುವ ರಾಜಕಾರಣಿಗಳ ವಿದ್ಯಾಸಂಸ್ಥೆಗಳೇ ಹೆಚ್ಚುತ್ತಿರುವ ಕಾರಣ, ಕನ್ನಡ ಮಾಧ್ಯಮ, ಸರ್ಕಾರಿ ಶಾಲೆ ಮತ್ತು ಕನ್ನಡ ಯಾರಿಗೂ ಬೇಡವಾಗಿದೆ ಎಂಬ ಆಕ್ಷೇಪ ವ್ಯಕ್ತಪಡಿಸಿದರು.
ಕಡ್ಡಾಯ ಮಾಧ್ಯಮ ಮಸೂದೆ ಜಾರಿಯಾಗಲಿ:
ರಾಜ್ಯ ಸರ್ಕಾರವು 1ರಿಂದ 5ನೇ ತರಗತಿವರೆಗೂ ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂಬ 2015ರಲ್ಲಿ ‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಶಿಕ್ಷಣ ಹಕ್ಕು ಕಾಯ್ದೆ-2009ರ ಸೆಕ್ಷನ್ (2) (ಎ್)ಗೆ ತಿದ್ದುಪಡಿ ತರಲಾಗಿದೆ. ಇದರ ಅಂಕಿತಕ್ಕೆ ರಾಷ್ಟ್ರಪತಿಗೆ ಕಳುಹಿಸಲಾಗಿದ್ದು, ಕೇಂದ್ರದ ಮೇಲೆ ಒತ್ತಡ ತರುವಲ್ಲಿ ರಾಜ್ಯ ಸರ್ಕಾರವು ವಿಲವಾಗಿದೆ ಎಂದು ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವು ತನ್ನದೇ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ. ಈ ನಡುವೆಯೇ 3 ಸಾವಿರ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಜಾರಿಗೊಳಿಸಲು ಆದೇಶ ಹೊರಡಿಸಿದೆ. ನೀತಿ ಜಾರಿಗೊಳ್ಳುವ ತನಕ ಕಾಯ್ದು ನಂತರ ತನ್ನ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಉತ್ತಮ ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್. ನಾಗಾಭರಣ, ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳಿಗೂ ಒಂದೇ ರೀತಿಯ ಪಠ್ಯಕ್ರಮವಿರಬೇಕು. ಸರ್ಕಾರಿ ಶಾಲೆಗಳಲ್ಲೊಂದು ಮತ್ತು ಖಾಸಗಿ ಶಾಲೆಗಳಲ್ಲಿ ಮತ್ತೊಂದು ರೀತಿಯ ಪಠ್ಯಕ್ರಮ ಬೋಧನೆಗೆ ಮೊದಲು ಕಡಿವಾಣ ಹಾಕಬೇಕಿದೆ. ತೃತೀಯ ಭಾಷಾ ಶಿಕ್ಷಣಕ್ಕೆ ಈಗಾಗಲೇ ತೆರೆ ಎಳೆಯಲಾಗಿದೆ. ಇನ್ನು ದ್ವಿಭಾಷೆಯಲ್ಲಿರುವುದನ್ನು ಮಾತೃಭಾಷೆಗೆ ಒತ್ತು ತರುವ ಕೆಲಸವಾಗಬೇಕಿದೆ ಎಂದರು.
ಚರ್ಚೆಯಲ್ಲಿ ಸಾಹಿತಿ ಡಾ. ವಸುಂಧರಾ ಭೂಪತಿ, ಕನ್ನಡಪರ ಹೋರಾಟಗಾರರಾದ ರಾ.ನಂ. ಚಂದ್ರಶೇಖರ್, ಸರ ಸುದರ್ಶನ್, ನಿವೃತ್ತ ಅಧಿಕಾರಿ ಎನ್.ಎಸ್. ವಿಶುಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
