ಬೆಂಗಳೂರು: ನಮ್ಮ ಪಕ್ಷದ ಶಾಸಕರು ಯಾರೂ ಇನ್ನೊಂದು ಪಕ್ಷವನ್ನು ನಂಬಿ ಜೆಡಿಎಸ್ ಬಿಟ್ಟು ಹೋಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾವು ಜಿ.ಟಿ.ದೇವೆಗೌಡರ ಅಧ್ಯಕ್ಷತೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಬಿಬಿಎಂಪಿ ಚುನಾವಣೆಗೂ ಸಿದ್ಧತೆ ನಡೆಯುತ್ತಿದೆ. ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಇದೆಲ್ಲ ಬರೀ ಊಹಾಪೋಹ ಅಷ್ಟೇ. ಇಂತವರು ಹೋಗುತ್ತಾರೆ ಎಂದು ಹೇಳಿದರೆ ನಾವು ಸರಿ ಮಾಡಿಕೊಳ್ಳುತ್ತೇವೆ. ಈ ರೀತಿಯ ಊಹಾಪೋಹದ ಸುದ್ದಿ ಮಾಡಬೇಡಿ. ಈ ಪ್ರಾದೇಶಿಕ ಪಕ್ಷ ಉಳಿಯಲು ಬಿಡಿ ಎಂದರು.
ಮಂಡ್ಯ ಜಿಲ್ಲೆಯ ರಾಜಕಾರಣದ ಬಗ್ಗೆಯೂ ಬಹಳ ಚರ್ಚೆ ಮಾಡಿದ್ದೇನೆ. ಒಬ್ಬರೇ ಒಬ್ಬರು ಕೂಡ ಪಕ್ಷ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಕುಮಾರಸ್ವಾಮಿ ಅವರು ಯಾರಿಗೂ ಅಷ್ಟು ಸುಲಭವಾಗಿ ಅರ್ಥವಾಗುವುದಿಲ್ಲ ಹಾಗೂ ಅವರನ್ನು ಜೀರ್ಣಿಸಿಕೊಳ್ಳುವುದು ಸುಲಭ ಸಾಧ್ಯವೂ ಅಲ್ಲ. ಕುಮಾರಸ್ವಾಮಿ ಅವರ ಪೆನ್‌ಡ್ರೈವ್ ವಾದ, ವಿವಾದ ನೋಡಿದ್ದೇನೆ. ಅವರು ಅಷ್ಟು ಸುಲಭವಾಗಿ ಮಾತನಾಡುವುದಿಲ್ಲ. ಆ ವಿಷಯದ ಬಗ್ಗೆ ಟೀಕೆ ಮಾಡುವವರಿಗೆ ಅದು ತಿಳಿದಿರಲಿ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಮೆಡಿಕಲ್ ಕಾಲೇಜು ರಾಜಕೀಯ ಬೇಡರಾಮನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ಕುಮಾರಸ್ವಾಮಿ ಅವರು ದೇವೇಗೌಡರ ಮಗ ಎಂದು ಮಾತನಾಡುವುದಿಲ್ಲ. ನನಗೆ ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಎಲ್ಲವೂ ಒಂದೇ. ಆದರೆ ರಾಮನಗರ ಜಿಲ್ಲೆ ಮಾಡಿದ್ದು ಯಾರು? ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನನ್ನನ್ನು ಸೋಲಿಸಬೇಕೆಂದು ಪ್ರಯತ್ನ ಮಾಡಿದರು. ಸತ್ಯ ಹೇಳಿ? ಆದರೆ ಅಂದೇ ರಾಮನಗರ ಜಿಲ್ಲೆ ಮಾಡಲು ಅವರಿಗೆ ಆಗ್ತಿರಲಿಲ್ವಾ? ಕುಮಾರಸ್ವಾಮಿಯವರೇ ಬಂದು ರಾಮನಗರವನ್ನು ಜಿಲ್ಲೆ ಮಾಡಬೇಕಿತ್ತಾ? ಎಂದು ಪ್ರಶ್ನಿಸಿದರು.
ರಾಮನಗರ ಜಿಲ್ಲಾ ಕೇಂದ್ರ ಸ್ಥಾನ. ಮೆಡಿಕಲ್ ಕಾಲೇಜ್ ವಿಚಾರದಲ್ಲೂ ರಾಜಕೀಯ ಮಾಡಬಾರದು. ಅವರದ್ದೇ ಸರ್ಕಾರವಿದೆ. ಕನಕಪುರಕ್ಕೆ ಇನ್ನೊಂದು ಕಾಲೇಜ್ ಮಾಡಲಿ. ನನ್ನದೇನೂ ತಕರಾರು ಇಲ್ಲ. ರಾಮನಗರ ಮೆಡಿಕಲ್ ಕಾಲೇಜ್ ಗೆ ತೊಂದರೆ ಮಾಡಬೇಡಿ ಎಂದು ಕುಮಾರಸ್ವಾಮಿ ಕೇಳುತ್ತಿದ್ದಾರೆ. ಕುಮಾರಸ್ವಾಮಿ ಅವರು ಯಾವುದೇ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳುವುದಕ್ಕೆ ಹೋಗುವುದಿಲ್ಲ. ಅವರ ಕ್ಷೇತ್ರದ ಬಗ್ಗೆ ಅವರು ಮಾತನಾಡಿದರೆ, ನಾನು ಏಕೆ ಆ ರೀತಿ ಮಾತನಾಡಲಿ ಎಂದು ದೇವೇಗೌಡ ಕೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 2 =
Remember me
