ಚಿಕ್ಕೋಡಿ:ಕಳೆದ ಮೂರು ದಿನಗಳಿಂದ ಈ ಊರುಗಳಲ್ಲಿ ವಿದ್ಯುತ್ ಪೂರೈಕೆ ಇರದ್ದರಿಂದ ಗ್ರಾಮಸ್ಥರು ಕತ್ತಲೆಯಲ್ಲೇ ಕಾಲ ಕಳೆಯುವಂತಾಗಿದೆ. ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದರಿಂದಿ ಗ್ರಾಮಸ್ಥರು ಹೋರಾಟ ನಡೆಸಲಾರಂಭಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಯಲ್ಪಾರಟ್ಟಿ, ಖೇಮಲಾಪೂತ, ಸಿದ್ದಾಪೂರ, ಅಲಖನೂರ, ಅಳಗವಾಡಿ, ನೀಲಜಿ, ಪರಮಾನಂದವಾಡಿ, ಯಬರಟ್ಟಿ, ಚಿಕ್ಕೂಡ, ಕುರಬಗೋಡೆ, ಬಡಬ್ಯಾಕುಡ ಗ್ರಾಮಗಳಲ್ಲಿ ಮೂರು ದಿನಗಳಿಂದ ರಾತ್ರಿ ವಿದ್ಯುತ್ ಪೂರೈಕೆ ಇಲ್ಲ.
ಈ ಕುರಿತು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಅವರು ಸರಿಯಾಗಿ ಸ್ಪಂದಿಸಿಲ್ಲ. ಪರಿಣಾಮವಾಗಿ ಮೂರು ದಿನಗಳಿಂದ ಈ ಗ್ರಾಮಗಳಲ್ಲಿ ಕತ್ತಲೆ ಆವರಿಸಿದ್ದು, ವಿದ್ಯಾರ್ಥಿಗಳ ಅಭ್ಯಾಸಕ್ಕೂ ತೊಂದರೆ ಉಂಟಾಗಿದೆ. ವಿದ್ಯುತ್ ಇರದ್ದರಿಂದ ರೊಚ್ಚಿಗೆದ್ದಿರುವ ಈ ಹನ್ನೊಂದು ಗ್ರಾಮಸ್ಥರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೊಲೆಯಾದ 50 ದಿನಗಳ ಬಳಿಕ ಅಸ್ಥಿಪಂಜರ ಪತ್ತೆ; ಇಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದವಳಿಂದಲೇ ಕೊಲೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
