ಬೆಂಗಳೂರು:ಪದವಿ ವಿದ್ಯಾರ್ಥಿಗಳಿಗೆ ನೀಡಲಾಗಿರುವ ಉಚಿತ ಲ್ಯಾಪ್​ಟಾಪ್ ಗುಣಮಟ್ಟದ್ದಾಗಿದ್ದು, ಯಾವುದೇ ನ್ಯೂನತೆಯಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದರು. ಪದವಿ ವಿದ್ಯಾರ್ಥಿಗಳಿಗೆ ನೀಡಲಾಗುವ ಲ್ಯಾಪ್​ಟಾಪ್​ನಲ್ಲಿ ಹಲವು ನ್ಯೂನತೆಗಳಿವೆ ಎಂದು ಜೆಡಿಎಸ್​ನ ಎಸ್.ಎಲ್.ಭೋಜೆಗೌಡ ಶೂನ್ಯವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಡಿಸಿಎಂ ಉತ್ತರ ನೀಡಿದರು.
2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲು 1,09,916 ಲ್ಯಾಪ್​ಟಾಪ್ ಖರೀದಿಸಲಾಗಿದ್ದು, ಟೆಂಡರ್ ಮೂಲಕ ಗುತ್ತಿಗೆದಾರರನ್ನು ಗುರುತಿಸಿ ಕಾರ್ಯಾದೇಶ ನೀಡಲಾಗಿದೆ. ಲ್ಯಾಪ್​ಟಾಪ್​ಗಳು ಉನ್ನತ ಶಿಕ್ಷಣ ಇಲಾಖಾ ತಾಂತ್ರಿಕ ಸಲಹಾ ಸಮಿತಿಯಲ್ಲಿ ಅನುಮೋದಿಸಿದ ತಾಂತ್ರಿಕ ವೈಶಿಷ್ಟ್ಯಗಳನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳಲು ಶೇ.10 ಲ್ಯಾಪ್​ಟಾಪ್​ಗಳನ್ನು ಕಿಯೋನಿಕ್ಸ್ ಸಂಸ್ಥೆ ಮೂಲಕ ತಪಾಸಣೆ ಮಾಡಲಾಗಿದೆ. ಆ ಕುರಿತಂತೆ ಕಿಯೋನಿಕ್ಸ್ ವರದಿ ನೀಡಿದ್ದು, ಲ್ಯಾಪ್​ಟಾಪ್​ಗಳು ಗುಣಮಟ್ಟದಿಂದ ಕೂಡಿವೆ ಎಂಬುದನ್ನು ತಿಳಿಸಿದೆ ಎಂದರು.
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
ಶಾಲಾ-ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂಬ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕ ಇಲಾಖೆ ಜತೆ ರ್ಚಚಿಸಿ, ಹಿರಿಯರ ಸಲಹೆ ಪಡೆದು ಪರಿಶೀಲಿಸುವುದಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಶ್ವಾಸನೆ ನೀಡಿದರು. ವಿಧಾನ ಪರಿಷತ್​ನಲ್ಲಿ ವೈ.ಎ.ನಾರಾಯಣಸ್ವಾಮಿ, ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸುತ್ತಿದ್ದಾಗ ಮಧ್ಯೆ ಪ್ರವೇಶಿಸಿದ ಪ್ರತಿಪಕ್ಷಗಳ ಹಲವು ಸದಸ್ಯರು ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
