ಹುಬ್ಬಳ್ಳಿ:ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್ ಹೇಳಿದರೆ ರಾಜಿನಾಮೆ ಕೊಡುತ್ತೇನೆ ಎಂದಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ‌ ಪದೇ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಈ ರೀತಿ‌ ಹೇಳಿರಬಹುದು ಎಂದಿದ್ದಾರೆ.
ಇಂದು ಬೆಳಿಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬಿಎಸ್​​ವೈ, ‘ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿರೋ ತನಕ ಸಿಎಂ ಆಗಿರ್ತೀನಿ. ಬೇಡ ಅಂದಾಗ ರಾಜಿನಾಮೆ ಕೊಟ್ಟು ಕೆಳಗಿಳೀತೀನಿ’ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, “ಸಿಎಂ ಯಡಿಯೂರಪ್ಪ ಕೊವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ” ಎಂದರು.
ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆಯೂ ಪಕ್ಷದ ಮುಂದಿಲ್ಲ‌. ಕರೊನಾ ಸಂಕಷ್ಟ ಕಾಲದಲ್ಲಿ ಈ ವಯಸ್ಸಿನಲ್ಲೂ ಅವರು ಉತ್ತಮ‌ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಕ್ರಿಯಾಶೀಲತೆಯಿಂದ ಕೆಲಸ‌ ಮಾಡುತ್ತಿದ್ದಾರೆ. ಸಧ್ಯ ಅವರನ್ನು ಬದಲಾವಣೆ ಮಾಡುವ ಯಾವುದೇ ವಿಚಾರವಿಲ್ಲ. ಹೈಕಮಾಂಡ್​​ನಿಂದಲೂ ಯಾವುದೇ ರೀತಿಯ ಸೂಚನೆ ಅವರಿಗಿಲ್ಲ ಎಂದು ಜೋಶಿ ವಿವರಣೆ ನೀಡಿದರು.
‘ಯಡಿಯೂರಪ್ಪ ಅವರೇ ನಮ್ಮ ನಾಯಕರು’ ಎಂದ ಸಿ.ಪಿ.ಯೋಗೇಶ್ವರ್… ರಾಜೀನಾಮೆಗೂ ಸಿದ್ಧವಂತೆ!

ಸಂಸದರು ‘ಕಾಣೆಯಾಗಿದ್ದಾರೆ’ ಎಂದು ಪೋಸ್ಟರ್​ ಹಿಡಿದ ಕ್ಷೇತ್ರದ ಜನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 9 =
Remember me
