ಬೆಂಗಳೂರು:ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್​ಗಳಲ್ಲಿ ಇನ್ನು ಮುಂದೆ ಚಾಲಕರು ಅಥವಾ ನಿರ್ವಾಹಕರು ಅನಪೇಕ್ಷಣಿಯವಾಗಿ ಮೊಬೈಲ್ ಬಳಕೆ ಮಾಡಿ ರೀಲ್ಸ್ ಮಾಡಿದರೆ ಸೇವೆಯಿಂದ ಅಮಾನತುಗೊಳಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ.
ಇದನ್ನೂ ಓದಿ:ಹಾಸನ ಪ್ರಕರಣ ಚರ್ಚೆ ಮಾಡಲು ಮುಖ ಇಲ್ವಾ? ನಯನಾ ಮೋಟಮ್ಮ ಗರಂ
ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಕಲ್ಯಾಣ ಸಾರಿಗೆ ಸಮುಚ್ಚಯಗಳಲ್ಲಿನ ಸಿಬ್ಬಂದಿ ಇತ್ತೀಚೆಗೆ ರೀಲ್ಸ್ ಚಟಕ್ಕೆ ಬಿದ್ದಿದ್ದು, ಕರ್ತವ್ಯದ ವೇಳೆ ರೀಲ್ಸ್ ಮಾಡುತ್ತಿದ್ದಾರೆ. ಕಳೆದ ಮೇ ತಿಂಗಳಲ್ಲಿ ಚಾಲಕ ಛತ್ರಿ ಹಿಡಿದುಕೊಂಡು ಬಸ್ ಓಡಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಈ ವಿಡಿಯೋವನ್ನು ಮುಂದಿಟ್ಟುಕೊಂಡು ವಿಪಕ್ಷಗಳ ಮುಖಂಡರು ಸರ್ಕಾರದ ವಿರುದ್ಧ ಬಸ್​ಗಳು ಸೋರುತ್ತಿವೆ ಎಂದು ಕೆಂಡಕಾರಿದ್ದರು.
ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ವೇಳೆ ಕೆಎಸ್​ಆರ್​ಟಿಸಿ ಬಸ್ ಚಾಲಕ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿಯಾಗಿದ್ದವು. ಕೆಲ ಚಾಲಕರ, ನಿರ್ವಾಹಕರ ಈ ಹುಚ್ಚಾಟಗಳಿಂದ ಪ್ರಯಾಣಿಕರು ಪರದಾಡುವಂತಾಗಿತ್ತು. ಈ ಸಂಬಂಧ ಹಲವಾರು ದೂರುಗಳು, ಆಕ್ಷೇಪಗಳು ಸಲ್ಲಿಕೆಯಾಗಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಇಲಾಖೆ, ಇನ್ನು ಮುಂದೆ ಕರ್ತವ್ಯದ ವೇಳೆ ಅನಪೇಕ್ಷಣೀಯವಾಗಿ ಮೊಬೈಲ್ ಬಳಕೆ ಹಾಗೂ ರೀಲ್ಸ್ ಮಾಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ:‘ನಿನ್ನಿಂದ ದೂರವಾಗಿ ಬದುಕಲಾರೆ’ ಪತ್ರ ಬರೆದಿಟ್ಟು ನದಿಗೆ ಹಾರಿದಳು; 1 ದಿನ ಕಳೆದ್ರು ಪತ್ತೆಯಾಗಿಲ್ಲ ಮೃತದೇಹ
ಕರ್ನಾಟಕ ಸಾರಿಗೆ ಇಲಾಖೆಯ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್ ಮಾಡಿದರೇ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಲಾಗುತ್ತದೆ. ರೀಲ್ಸ್ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್ ಅಲ್ಲ. ಅಂಥ ನೌಕರರ ಬಗ್ಗೆ ಯಾವುದೇ ದಾಕ್ಷಿಣ್ಯ ತೋರದೆ ಕೆಲಸದಿಂದ ತೆಗೆದು ಹಾಕಲಾಗುವುದು.
| ರಾಮಲಿಂಗಾ ರೆಡ್ಡಿ ಸಾರಿಗೆ ಸಚಿವ
ಈ ವಿಷಯದ ಬಗ್ಗೆ ಈಗ ನಾನು ತುಟಿಬಿಚ್ಚಲ್ಲ! ಮುಂದೆ ನೀವೇ ನೋಡ್ತೀರಾ… ನಟಿ ಅಂಜಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 20 =
Remember me
