ಬೆಂಗಳೂರು :ದೈನಂದಿನ ಕೃಷಿ ಚಟುವಟಿಕೆಗಳಿಗೆ ಮತ್ತು ಕೃಷಿ ಇಲಾಖೆಗೆ ನೈಟ್ ಕರ್ಫ್ಯೂ ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆ ಅಥವಾ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ವಿಕಾಸಸೌಧದ ಕಚೇರಿಯಲ್ಲಿ ಮಾತನಾಡಿದ ಸಚಿವ ಪಾಟೀಲ್, ಹೂವು, ಹಣ್ಣು, ದವಸ ಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್.ಟಿ.ಒ. ಸೇರಿದಂತೆ ಯಾರೂ ತೊಂದರೆ ಮಾಡಬಾರದು. ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು, ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು ಎಂದಿದ್ದಾರೆ.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ನಟಿ ಶನಾಯ ಅರೆಸ್ಟ್: ಹೈಸ್ಕೂಲ್​ ಲವ್​ಗೆ ಅಡ್ಡಿಯಾದ ಸೋದರನ ಸಾವಿನ ಹಿಂದಿದೆ ಬೆಚ್ಚಿಬೀಳಿಸೋ ರಹಸ್ಯ
ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದುಬಂದಿರುತ್ತದೆ. ಹೀಗೆ ಮಾಡಿರುವುದು ತಪ್ಪು. ಎಲ್ಲಾ ಇಲಾಖೆಗಳ ಅಧಿಕಾರಿಗಳು ರೈತರಿಗೆ ಸಹಕಾರ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಕರೊನಾ ಸುರಕ್ಷತಾ ಕ್ರಮಗಳೊಂದಿಗೆ, ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದು ಬಿ.ಸಿ.ಪಾಟೀಲ್ ಆಗ್ರಹಿಸಿದ್ದಾರೆ.
ಹೋಂ ಕ್ವಾರಂಟೈನ್​​ನಲ್ಲಿ ನಟ ಮಹೇಶ್​ ಬಾಬು

ದೇವಸ್ಥಾನದಲ್ಲಿ ಸಿಕ್ಕಿತು ಪೂಜಾರಿಗಳ ತಲೆ ಕಡಿದ ದೇಹ ! ಬೆಚ್ಚಿಬೀಳಿಸುತ್ತೆ ಈ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − one =
Remember me
