ಬೆಂಗಳೂರು:ಕೋವಿಡ್ ಕಾರಣ ಪತಿಯನ್ನು ಕಳೆದುಕೊಂಡ ಮಹಿಳೆ ಅನುಕಂಪ ಆಧಾರದ ಮೇಲೆ ಕೆಲಸ ಪಡೆದುಕೊಂಡರೂ, ವೇತನ ಕೊಡಲು 11 ತಿಂಗಳು ಸತಾಯಿಸಿದ ಪ್ರಕರಣವೊಂದನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರೇ ಬಹಿರಂಗಪಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಆ ಮಹಿಳೆ ಕೆಲಸ ಮಾಡುತ್ತಿದ್ದರು. ತಾವು ಚಿಕ್ಕಮಗಳೂರು ಪ್ರವಾಸ ವೇಳೆ ಕಚೇರಿಯೊಂದರ ಆವರಣದಲ್ಲಿ ನಿಂತಿದ್ದ ಆಕೆಯನ್ನು ಮಾತನಾಡಿಸಿದಾಗ ವೇತನ ವಿಚಾರ ತಿಳಿಸಿದರು. ವೇತನ ನೀಡದಿರಲು ಕಾರಣವೇನು ಎಂದು ಅರಿಯಲು ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದಾಗ, ಸರಿಯಾದ ಮಾಹಿತಿ ಇರಲಿಲ್ಲ. ಸೂಕ್ಷ್ಮವಾಗಿ ಗಮನಿಸಿದಾಗ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ಎರಡು ತಿಂಗಳು, ಮೂರು ತಿಂಗಳು ಡಿಡಿಪಿಐ ಕಚೇರಿಯಲ್ಲಿ ಸಕಾರಣವಿಲ್ಲದೆ ಕಡತ ಇತ್ತು. ಕೂಡಲೇ ವೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದೆ. ಕೇವಲ ಒಂದೇ ದಿನದಲ್ಲಿ ಕೆಲಸ ಆಯಿತು ಎಂದು ಮಾಧ್ಯಮಗಳಿಗೆ ವಿವರಿಸಿದರು.
ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ತಾವು ಮಾಡಬೇಕಾದ ಕೆಲಸ ಮಾಡಿದ್ದರೆ ಆ ಮಹಿಳೆ 11 ತಿಂಗಳು ಕಾಲ ವೇತನಕ್ಕಾಗಿ ಕಾಯುವ ಪರಿಸ್ಥಿತಿ ಬರುತ್ತಿರಲಿಲ್ಲ. ಇಂತಹ ಘಟನೆಗಳು ಮರಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿ ಮೇಲಿದೆ. ಅನಗತ್ಯ ವಿಳಂಬ ಮಾಡಬಾರದು ಎಂದು ನಾಗೇಶ್ ಹೇಳಿದರು.
ಸರ್ಕಾರಿ ಶಾಲೆ ಎದುರೇ ವಾಮಾಚಾರ; ಗ್ರಾಮಸ್ಥರು, ಶಿಕ್ಷಕರಲ್ಲಿ ಆತಂಕ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 15 =
Remember me
