ಬೆಂಗಳೂರು:ನಮ್ಮಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಇದನ್ನೂ ಓದಿ:ಜಾರ್ಖಂಡ್​: ಜೆಎಂಎಂ ತೊರೆದು ಬಿಜೆಪಿ ಸೇರ್ಪಡೆಯಾದ ಹೇಮಂತ್ ಸೊರೇನ್‌ ಸೊಸೆ ಸೀತಾ ಸೊರೆನ್!
ತಮ್ಮ ಎಕ್ಸ್​ ಖಾತೆಯಲ್ಲಿ ಸರಣಿ ಟ್ಟೀಟ್​ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೋದಿ ಅವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು. ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ ಆಕ್ರೋಶ ವ್ಯಕ್ತಪಡಿಸಿದರು.
ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ:ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ಕೇಂದ್ರ ಬಿಜೆಪಿ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ ನರೇಂದ್ರ ಮೋದಿ ಅವರೇ ಎಂದು ಸಿದ್ದರಾಮಯ್ಯ ಕಿಡಿಕಾಡಿದ್ದಾರೆ.
ಕ್ಯಾರೇ ಅನ್ನದೆ ಸಭೆಗೆ ಈಶ್ವರಪ್ಪ ಗೈರು:ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿಯಲ್ಲಿ ನಾಯಕರೇ ಇಲ್ವಾ:ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಬೆಜೆಪಿ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ. ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ ಮೋದಿ ಅವರೇ ಎಂದು ಸರಣಿ ಟ್ಟೀಟ್​ ಮಾಡಿ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸೋಮವಾರ ಆಯೋಜಿಸಿದ್ದ ವಿಕಸಿತ ಭಾರತ ಸಮಾವೇಶದಲ್ಲಿ ಮಾತನಾಡಿದ ಮೋದಿ ಅವರು, ಕಾಂಗ್ರೆಸ್‌ ಬಳಿ ಅಭಿವೃದ್ಧಿಯ ಅಜೆಂಡಾ ಇಲ್ಲ. ಸುಳ್ಳು ಹೇಳುವುದೇ ಕಾಂಗ್ರೆಸ್‌ನ ಮೊದಲ ಅಜೆಂಡಾ, ತಮ್ಮ ಸುಳ್ಳುಗಳನ್ನು ಸಮರ್ಥಿಸಿಕೊಳ್ಳಲು ಮತ್ತೊಂದು ಸುಳ್ಳು ಹೇಳುವುದು ಅವರ ಎರಡನೇ ಅಜೆಂಡಾ. ದಿಲ್ಲಿ ಕಾಂಗ್ರೆಸ್‌ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದವರು ಇಂದು ಒಂದಾಗಿದ್ದಾರೆ ಎಂದಿದ್ದರು.
ಕರ್ನಾಟಕದಲ್ಲಿ ಒಬ್ಬರು ಮುಖ್ಯಮಂತ್ರಿ ಇದ್ದಾರೆ, ಮುಖ್ಯಮಂತ್ರಿ ಆಕಾಂಕ್ಷಿ ಇದ್ದಾರೆ. ಸೂಪರ್‌ ಸಿಎಂ ಇದ್ದಾರೆ, ಶ್ಯಾಡೋ ಸಿಎಂ ಇದ್ದಾರೆ. ಈ ನಾಲ್ವರು ಸಿಎಂಗಳ ಜೊತೆ ದಿಲ್ಲಿಯ ಕಲೆಕ್ಷನ್‌ ಮಿನಿಸ್ಟರ್‌ ಕೂಡ ಇದ್ದು, ಕರ್ನಾಟಕವನ್ನು ಲೂಟಿ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಇರುವ ನಿಮ್ಮ ಕೋಪ ನನಗೆ ಅರ್ಥ ಆಗುತ್ತಿದೆ. ಅದನ್ನು ಈ ಚುನಾವಣೆಯಲ್ಲಿ ತೋರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಕೇಶ್ ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
