ಧಾರವಾಡ:ಇತ್ತೀಚೆಗೆ ಕೆಲವು ಸರ್ಕಾರಿ ಸಿಬ್ಬಂದಿ/ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗಿದೆ. ಇದೀಗ ಇನ್ನೊಬ್ಬ ಅಧಿಕಾರಿಯ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದರಲ್ಲೂ ಈ ಪ್ರಕರಣ ಸರ್ಕಾರಿ ಕಚೇರಿಯೊಳಗೇ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ಪಂಚಾಯತ್​ ಕಚೇರಿಯಲ್ಲಿ ಈ ಘಟನೆ ನಡೆದಿದೆ. ತಾಲೂಕು ಪಂಚಾಯತ್ ಕಚೇರಿಯ ಸಕ್ರೆಪ್ಪ ಚಕ್ಕೋಡಿ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಇಲ್ಲಿ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ:ಈತ ಗಂಡಸಿಯ ಸಾಹಸಿ: ಚಿರತೆಯನ್ನು ಹಿಡಿದು ಬೈಕ್​ಗೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ!
ಕಚೇರಿಯ ಒಂದು ಬದಿಯ ಕಟ್ಟಡದಲ್ಲಿ ಇವರು ಇಂದು ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ನವಲಗುಂದ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?

ನೇರಳೆ ಹಣ್ಣುಗಳನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ?: ಆರೋಗ್ಯಕ್ಕೇನು ತೊಂದರೆ?

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:five × two =
Remember me
