ಬೆಂಗಳೂರು:ಕರೊನಾ ಲಾಕ್​ಡೌನ್​ನಿಂದ ಸಮಸ್ಯೆ ಅನುಭವಿಸುತ್ತಿರುವ ನಿರಾಶ್ರಿತರಿಗೆ ತುರ್ತು ಅಹಾರ ವ್ಯವಸ್ಥೆ ಕಲ್ಪಿಸಲು ನೋಡಲ್ ಅಧಿಕಾರಿಗಳ ನೇಮಕ ಮಾಡಿ ಪಾಲಿಕೆ ಆಯುಕ್ತ ಬಿ.ಎಚ್. ಅನಿಲ್​ಕುಮಾರ್ ಆದೇಶ ಹೊರಡಿಸಿದ್ದಾರೆ.
ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬ ಕಾರಣಕ್ಕೆ ಸರ್ಕಾರ ಹಾಗು ಪಾಲಿಕೆಯಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಜತೆಗೆ ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ಊಟದ ವ್ಯವಸ್ಥೆ ಮಾಡಲು ಹಲವು ಸರ್ಕಾರೇತರ ಸಂಸ್ಥೆಗಳು (ಎನ್​ಜಿಒ) ಮನವಿ ಸಲ್ಲಿಸುತ್ತಿವೆ. ಇಂತಹ ಸಂಘ- ಸಂಸ್ಥೆಗಳನ್ನು ಸಮನ್ವಯ ಮಾಡಿಕೊಂಡು ಆಹಾರ ಹಾಗೂ ಇತರೆ ಅಗತ್ಯ ವಸ್ತುಗಳನ್ನು ಹಂಚುವ ಸಂಬಂಧ ಜಂಟಿ ಆಯುಕ್ತ (ಆರೋಗ್ಯ) ಸರ್ಫರಾಜ್ ಖಾನ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ನೆರವು ನೀಡುವ ಸ್ವಯಂ ಸೇವಾ ಸಂಸ್ಥೆಗಳು ಅನುಮತಿ ಪಡೆಯಲು ದೂ: 080- 2297 5591, 94481 11066 ಸಂರ್ಪಸಬೇಕು.
ವಲಯವಾರು ದಿನಸಿ ಸಾಮಗ್ರಿಗಳ ಕಿಟ್ ವಿತರಿಸುವ ಕಾರ್ಯ ನಿರ್ವಹಣೆಗೆ ವಿಶೇಷ ಆಯುಕ್ತ (ಘನತ್ಯಾಜ್ಯ) ಡಿ. ರಂದೀಪ್ ನೇತೃತ್ವದಲ್ಲಿ 6 ಜನರ ತಂಡ ರಚಿಸಲಾಗಿದೆ. ಇವರ ಅಧೀನದಲ್ಲಿ ಸಮನ್ವಯ ಅಧಿಕಾರಿಯಾಗಿ ಇಂಜಿನಿಯರ್ ಬಿ.ಟಿ. ಮೋಹನ್ ಕೃಷ್ಣ, ಉಸ್ತುವಾರಿ ಅಧಿಕಾರಿಗಳಾಗಿ ಪೂರ್ವ ಮತ್ತು ಯಲಹಂಕ ವಲಯಕ್ಕೆ ಎಂ. ಲೋಕೇಶ್, ಪಶ್ಚಿಮ ಮತ್ತು ದಾಸರಹಳ್ಳಿ ವಲಯಕ್ಕೆ ಎಲ್. ವೆಂಕಟೇಶ್, ದಕ್ಷಿಣ ಮತ್ತು ಆರ್.ಆರ್. ನಗರ ವಲಯಕ್ಕೆ ಡಿ.ಎಂ. ನಿರಂಜನ್ ಹಾಗೂ ಬೊಮ್ಮನಹಳ್ಳಿ ಮತ್ತು ಮಹದೇವಪುರ ವಲಯಕ್ಕೆ ಜೆ.ಆರ್. ಮಹೇಶ್ ಅವರನ್ನು ನೇಮಕ ಮಾಡಿ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮನೋಲ್ಲಾಸ: ನಾಳೆಗಳ ಆಪತ್ತನ್ನು ದೂರಮಾಡೋಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 2 =
Remember me
