ಬೆಂಗಳೂರು:ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭವಾಗಿದ್ದು,ಮೊದಲ ದಿನವೇ 221 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಅಂತೆಯೇ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಂದ 100 ಮಂದಿ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಧಾರವಾಢ ಜಿಲ್ಲೆಯಲ್ಲಿ ಮೊದಲ ದಿನ 7 ನಾಮಪತ್ರಗಳು ಸಲ್ಲಿಕೆಯಾಗಿವೆ. ಬಾಗಲಕೋಟೆ ಜಿಲ್ಲೆಯಲ್ಲಿ ಮೊದಲ ದಿನ ಏಳು ಮತಕ್ಷೇತ್ರಗಳು ಸೇರಿ 11 ನಾಮಪತ್ರಗಳು ಸಲ್ಲಿಕೆಯಾಗಿವೆ. ಬಳ್ಳಾರಿ ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ದಿನ 5 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಪ್ರಿಲ್ 15ರಂದು ಶಿಗ್ಗಾವಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಒಳ್ಳೆಯ ಮೂಹುರ್ತ ಹಿನ್ನೆಲೆ ಎಪ್ರಿಲ್ 15 ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ. ಬಳಿಕೆ ಎಪ್ರಿಲ್ 19ಕ್ಕೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
