ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಲಿದ್ದು, ಶುಕ್ರವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ರಂಗೇರಿರುವ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆ ಹೊರಡಿಸಲಿದೆ. ರಾಜ್ಯದ ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಏ.19 ಕಡೆಯ ದಿನವಾಗಿದ್ದು, 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. 2ನೇ ಹಂತದಲ್ಲಿ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ವಿಜಾಪುರ, ಕಲಬುರಗಿ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.
ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 2,88,08,182 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಇದರಲ್ಲಿ ಪುರುಷರು 1,44,17,530, ಮಹಿಳೆಯರು 1,43,87,585, ತೃತೀಯ ಲಿಂಗಿಗಳು 3067, ಸೇವಾ ಮತದಾರರು 11,160, ಯುವ ಮತದಾರರು 5,99,444, ವಿಶೇಷ ಚೇತನ ಮತದಾರರು 2,76,042, 85 ವರ್ಷ ಮೇಲ್ಪಟ್ಟವರು 3,40,856, ಹಾಗೂ 2,849 ಸಾಗರೋತ್ತರ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.
ಮೇ 7 ರಂದು ನಡೆಯಲಿರುವ ಚುನಾವಣಾ ಕಣದಲ್ಲಿ ಘಟಾನುಘಟಿ ನಾಯಕರು ಇದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿ.ವೈ.ರಾಘವೇಂದ್ರ, ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಕಣದಲ್ಲಿದ್ದಾರೆ.ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್, ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಬೀದರ್‌ನಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮಲು ಸ್ಪರ್ಧೆಯಲ್ಲಿದ್ದಾರೆ.ಕಾಂಗ್ರೆಸ್‌ನಿಂದ ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಅಳಿಯ ರಾಧಾಕೃಷ್ಣನ್ ಕಲಬುರಗಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಬೆಳಗಾವಿ, ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ, ಧಾರವಾಡ ಕ್ಷೇತ್ರದಲ್ಲಿ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರರಾಗಿ ಶ್ರೀ ದಿಂಗಾಲೇಶ್ವರ ಸ್ವಾಮೀಜಿ, ಶ್ರೀ ರಾಮಲು ವಿರುದ್ಧ ಶಾಸಕ ತುಕಾರಾಂ, ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಬೀದರ್‌ನಿಂದ ಅದೃಷ್ಟ ಪರೀಕ್ಷೆಗೊಡ್ಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
