ಬೆಂಗಳೂರು: ವಿಧಾನ ಪರಿಷತ್ ನಾಮನಿರ್ದೇಶನ ಮಾಡುವಾಗ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಪರಿಗಣಿಸಬೇಕು, ಅವಕಾಶ ಪಡೆದವರಿಗೆ ಪುನಃ ಅವಕಾಶ ಕೊಡಬಾರದೆಂದು ದನಿ ಎತ್ತಿದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಸಿದ್ದಾರೆ.ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಪ್ರಕ್ರಿಯೆ ನಡೆದಿದ್ದು, ಈ ವೇಳೆ ಉಮಾಶ್ರೀ, ಎಂ.ಆರ್.ಸೀತಾರಾಮ್, ಸುಧಾಮ್ ದಾಸ್ ಹೆಸರು ಅಂತಿಮಗೊಳಿಸಲಾಗಿದೆ ಎಂಬ ವಿಚಾರ ಪಕ್ಷದ ಕೆಲವು ಮುಖಂಡರನ್ನು ಕೆರಳಿಸಿತ್ತು. ಹೀಗಾಗಿ ಸೋಮವಾರ ಪಕ್ಷದ ಕಚೇರಿ ಸಮೀಪದ ಸಭಾಂಗಣದಲ್ಲಿ ಸಭೆ ಕರೆದಿದ್ದರು.ಈ ಸಭೆಗೆ ಕಾರ್ಯಕರ್ತರು ತೆರಳದಂತೆ ತಡೆಯುವ ಪ್ರಯತ್ನವೂ ನಡೆದಿತ್ತು. ಈ ನಡುವೆಯೂ 25ಕ್ಕೂ ಹೆಚ್ಚು ಮಂದಿ ಒಟ್ಟುಗೂಡಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರನ್ನು ಡಿ.ಕೆ.ಶಿವಕುಮಾರ್ ಕರೆಸಿ ಸಮಾಧಾನ ಮಾಡಿದ್ದಾರೆ.ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ, ನೋವಾಗದಂತೆ ನೋಡಿಕೊಳ್ಳಲಾಗುವುದು. ಅವಕಾಶದ ಅಪೇಕ್ಷಿತರು ಅರ್ಜಿ ಕೊಟ್ಟರೆ ನಿಗಮ ಮಂಡಳಿ ನೇಮಕದಲ್ಲಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − one =
Remember me
