ಬೆಂಗಳೂರು: ಅಯೋಧ್ಯೆಯಲ್ಲಿನ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ನೀಡಲಾದ ಆಹ್ವಾನವನ್ನು ಕಾಂಗ್ರೆಸ್ ಹೈಕಮಾಂಡ್ ಗೌರವಯುತವಾಗಿ ತಿರಸ್ಕರಿಸಿದೆ. ಈ ನಿಲುವಿಗೆ ನಾವೆಲ್ಲ ಬದ್ಧರಾಗಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿವ ನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿಲ್ಲ. ಚುನಾವಣಾ ದೃಷ್ಟಿಯಿಂದ ತರಾತುರಿಯಲ್ಲಿ ಉದ್ಘಾಟನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಉದ್ಘಾಟನೆಗೆ ಹೋಗದಿರಲು ನಿರ್ಧರಿಸಿದೆ. ಪಕ್ಷ ಹೇಳಿದ ಹಾಗೇ ಕೇಳಬೇಕು. ಕೆಲವು ನಾಯಕರು ವೈಯಕ್ತಿಕವಾಗಿ ಹೇಳಿಕೆ ಕೊಡುತ್ತಿದ್ದಾರೆ. ನನ್ನ ಅಭಿಪ್ರಾಯವನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ. ತೀರ್ಮಾನ ಅವರಿಗೆ ಬಿಟ್ಟದ್ದು. ಪಕ್ಷ ಹೇಳಿದಂತೆ ಪಾಲನೆ ಮಾಡುತ್ತೇವೆ. ನಾವ್ಯಾರೂ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಚರ್ಚೆಯಾಗುವುದಿಲ್ಲ. ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಅನೇಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ವಿವಿಧ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಹುದ್ದೆ ದೊರೆತಾಗ ನಾವೂ ಸರ್ಕಾರದಲ್ಲಿ ಭಾಗಿ ಎಂಬ ಅಭಿಪ್ರಾಯ ಅವರಲ್ಲಿ ಬರುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂಬ ನಿಲುವು ಅವರದಾಗಿತ್ತು. ಆದರೆ ಎಐಸಿಸಿ ಅಧ್ಯಕ್ಷರು ಈ ವಿಷಯವಾಗಿ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದಾರೆ. ಅದನ್ನು ನಾವು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಚಿವರು ತಮ್ಮ ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಆರಂಭದಲ್ಲೇ ಸೂಚಿಸಲಾಗಿದೆ. ಹೈಕಮಾಂಡ್ ವಹಿಸುವ ಎಲ್ಲ ಜವಾಬ್ದಾರಿಗಳನ್ನು ಹೊತ್ತು ಕೆಲಸ ಮಾಡುತ್ತೇವೆ ಎಂದು ಡಾ.ಜಿ.ಪರಮೇಶ್ವರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
