ಬೆಂಗಳೂರು:ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಇದೇ ಜನವರಿ 21, 22ರಂದು ಆಯೋಜಿಸಿರುವ ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದರು.
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯು ಬೆಂಗಳೂರಿನ ಅರಮನೆ ಮೈದಾನದ ಶೀಶ್ ಮಹಾಲ್ ಪ್ಯಾಲೇಸ್ ಗೇಟ್ ನಂಬರ್ 7ರಲ್ಲಿ ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮ ಹಮ್ಮಿಕೊಂಡಿದೆ.
ಉತ್ತರ ಕರ್ನಾಟಕ ಭಾಗದಿಂದ ವಿವಿಧ ಉದ್ಯೋಗ ಅರಸಿ ಬಂದು ಬೆಂಗಳೂರು ಮಹಾನಗರದಲ್ಲಿ ನೆಲೆಸಿ ನಮ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ವಿವಿಧ ಬಡಾವಣೆಯಲ್ಲಿ ಸಂಘಗಳನ್ನು ಕಟ್ಟಿಕೊಂಡಿದ್ದು, ಈ ಎಲ್ಲ ಸಂಸ್ಥೆಗಳು ಸೇರಿ “ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ”ಯನ್ನು ಕಟ್ಟಿಕೊಂಡು ಮತ್ತಷ್ಟು ಸಂಘಟಿತರಾಗಿದ್ದೇವೆ. ನಾವು ನಮ್ಮವರಿಗಾಗಿ ಕೈ ಜೋಡಿಸುತ್ತ ಎಲ್ಲರನ್ನೂ ಒಂದೆಡೆ ಸೇರಲು ಮತ್ತು ಬೆಳೆಯಲು ಒಬ್ಬರಿಗೊಬ್ಬರು ಮೆಟ್ಟಿಲಾಗಲು ಹಾಗೂ ನಮ್ಮ ಸಂಸ್ಕೃತಿ ಪರಂಪರೆ ಮುಂದುವರಿಸಲು ಈ ಬೃಹತ್ ಉತ್ಸವ ಹಮ್ಮಿಕೊಂಡಿದ್ದೇವೆ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ ಪರಂಪರೆ, ಉಡುಗೆ ತೊಡುಗೆ ಆಹಾರ ಪದ್ಧತಿ ಎಲ್ಲವನ್ನೂ ಅನಾವರಣಗೊಳಿಸಲು ಶನಿವಾರ-ಭಾನುವಾರ ಎರಡೂ ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರ ಸಾಂಸ್ಕೃತಿಕ ಕಾರ್ಯಕ್ರಗಳು ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರ 3.24 ಗುಂಟೆ ಜಮೀನು ಮಂಜೂರು ಮಾಡಿದ್ದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ಅವರ ಸಚಿವ ಸಂಪುಟದ ಸದಸ್ಯರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲು ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..
‘ನಾನು ಯೂಟ್ಯೂಬರ್ ಆಗಿದ್ದು ಯಾಕೆ?’ ಅಂತ ಖುದ್ದು ಡಾ.ಬ್ರೋ ಅವರೇ ಹಂಚಿಕೊಂಡಿದ್ದಾರೆ ಇಲ್ಲಿ..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − fourteen =
Remember me
