ಬೆಳಗಾವಿ:ವಿಧಾನ ಪರಿಷತ್ತಿನ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಅಂತಿಮ ಘಟ್ಟ ತಲುಪಿದ್ದು, ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಬುಧವಾರ ಬೆಳಗ್ಗೆ 8ಕ್ಕೆ ಮತ ಎಣಿಕೆ ಶುರುವಾಗಿದೆ. ಮತ ಎಣಿಕೆ ಆರಂಭಕ್ಕೂ ಮುನ್ನವೇ ಕೇಂದ್ರದಲ್ಲಿ ಕೆಲಕಾಲ ಗೊಂದಲ ಉಂಟಾಗಿತ್ತು.
ಮತಗಟ್ಟೆ ನಂಬರ್​ 4ರ ಮತಪೆಟ್ಟಿಗೆಯ ಮೇಲೆ ಕಟ್ಟಿದ ಬಟ್ಟೆ ಬದಲಾವಣೆಯಾಗಿತ್ತು. ಪೆಟ್ಟಿಗೆ ಮೇಲೆ ಸೀಲ್ ಹಾಕದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಲೋನಿ ಪರ ಏಜೆಂಟರು ಆಕ್ಷೇಪ ವ್ಯಕ್ತಪಡಿಸಿದರು. ಜೋರಾಗಿ ಗದ್ದಲ ಶರುವಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾನ್ ಬಿಸ್ವಾಸ್, ಸದಲಗಾ- ಚಿಕ್ಕೋಡಿ ಭಾಗದ ಎರಡು ಮತಪೆಟ್ಟಿಗೆ ಮೇಲೆ ಈ ರೀತಿ ಆಗಿದೆ. ಮತದಾನ ಮುಗಿದ ಬಳಿಕ ಇದೇ ಬಟ್ಟೆಯನ್ನೇ ಸುತ್ತಲಾಗಿತ್ತು. ಇದರಲ್ಲಿ ಅನುಮಾನ ಬೇಡ ಎಂದು ಮನವೊಲಿಸಿದರು.

ವಾಯವ್ಯ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಜೂ.13ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಇಂದು ನಡೆಯುತ್ತಿದೆ. ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆ ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ಮ್ಯಾನೇಜ್​ಮೆಂಟ್​ ಕಾಲೇಜಿನಲ್ಲಿ ನಡೆಯುತ್ತಿದೆ.

ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ಸಮ್ಮುಖದಲ್ಲಿ ಮತ ಎಣಿಕೆ ಕೇಂದ್ರ ಸ್ಟ್ರಾಂಗ್ ರೂಂ ತೆರೆಯಲಾಗಿದೆ.‌ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾದ ಬಿಜೆಪಿ ಬಸವರಾಜ ಹೊರಟ್ಟಿ, ಅರುಣ ಶಹಾಪುರ, ಹಣಮಂತ‌ ನಿರಾಣಿ ಹಾಗೂ ಕಾಂಗ್ರೆಸ್​ನ ಪ್ರಕಾಶ ಹುಕ್ಕೇರಿ ಹಣೆಬರಹ ಬಹುತೇಕ ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಫಲಿತಾಂಶ ಏನಾಗಲಿದೆ ಎಂಬ ಕುತೂಹಲದಿಂದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ವಿಜಯಪುರ, ಬಾಗಲಕೋಟೆ ಸೇರಿದಂತೆ ವಿವಿಧ ತಾಲೂಕುಗಳಿಂದ ಬೆಂಬಲಿಗರು ಬೆಳಗಾವಿ ನಗರದ ಜ್ಯೋತಿ ಕಾಲೇಜು ಮುಂಭಾಗ ಜಮಾಯಿಸಿದ್ದಾರೆ.
ಗೊರವನಹಳ್ಳಿ ಸಮೀಪ ಘೋರ ಕೃತ್ಯ: 3 ವರ್ಷದ ಬಳಿಕ ಸಿಕ್ಕಿಬಿದ್ದವ ಬಾಯ್ಬಿಟ್ಟ ರಹಸ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ

ಮೇಲುಕೋಟೆ ಬಾಹುಬಲಿ ಖ್ಯಾತಿಯ ರಾಮಸ್ವಾಮಿ ಅಯ್ಯಂಗಾರ್ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 16 =
Remember me
