ಬೆಂಗಳೂರು: ‘ನಾನಾಗಲಿ, ನಮ್ಮ ಕುಟುಂಬದ ಇತರರಾಗಲಿ ಜಿ- ಕ್ಯಾಟಗರಿ, ಕೆಎಚ್ ಬಿ ಅಥವಾ ಕೆಐಎಡಿಬಿಯ ನಿವೇಶನಗಳನ್ನು ಸರ್ಕಾರದಿಂದ ಪಡೆದುಕೊಂಡಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಆರೋಪಕ್ಕೆ ಅವರು ಪ್ರತಿಯುತ್ತರ ನೀಡಿದ್ದಾರೆ.
ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ. ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಗ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ. ಎಲ್ಲ ಪಕ್ಷಗಳ ಸರ್ಕಾರಗಳ ಆಡಳಿತಾವಧಿಯಲ್ಕೂ ಈ ಸಂಸ್ಥೆಗಳು ಈ ರೀತಿ‌ ನಿವೇಶನ ಪಡೆದು, ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವುದನ್ನು ನಾರಾಯಣಸ್ವಾಮಿ ಅರ್ಥ ಮಾಡಿಕೊಳ್ಳಬೇಕು’ ಎಂದು ಸಚಿವರು ತಿರುಗೇಟು ನೀಡಿದರು.
ಬಾಗ್ಮನೆಯೊಂದಿಗೆ ನಮ್ಮ ಕುಟುಂಬ ಮಟ್ಟದ ವ್ಯವಹಾರಕ್ಕೂ ಸರಕಾರದ ಮಟ್ಟದಲ್ಲಿ ಆಗುವ ನಿರ್ಧಾರಗಳಿಗೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬಾಗ್ಮನೆ ಸಂಸ್ಥೆಯವರು ಬೆಂಗಳೂರಿನ ಏರೋಸ್ಪೇಸ್ ಪಾರ್ಕಿನಲ್ಲಿ ಕೈಗಾರಿಕಾ ನಿವೇಶನ ಕೋರಿ ಅರ್ಜಿ ಹಾಕಿದ್ದರು. ಇಂತಹ ಸಂದರ್ಭದಲ್ಲಿ ನಾವು ಸಂಸ್ಥೆಯ ಅರ್ಹತೆ, ಸಾಧನೆಗಳನ್ನು ಮಾತ್ರ ಪರಿಗಣಿಸುತ್ತೇವೆ ಅಷ್ಟೆ. ನಾರಾಯಣಸ್ವಾಮಿ ಅವರಿಗೆ ಇಂತಹ ಸರಳ ಸತ್ಯ ಗೊತ್ತಾಗದೆ ಇರುವುದು ಆಶ್ಚರ್ಯಕರ ಸಂಗತಿ ಎಂದು ಅವರು ವಿವರಿಸಿದ್ದಾರೆ.
ವೈಯಕ್ತಿಕ ಮತ್ತು ಸರಕಾರದ ಕೆಲಸಗಳನ್ನು ಪರಸ್ಪರ ತಳುಕು ಹಾಕಬಾರದು. ನಾರಾಯಣಸ್ವಾಮಿ ಇಂತಹ ಪ್ರಬುದ್ಧತೆಯನ್ನು ಪ್ರದರ್ಶಿಸಬೇಕು. ಇವರ ಮಾತುಗಳ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದು ಯಾರಿಗಾದರೂ ಅರ್ಥವಾಗುತ್ತದೆ ಎಂದು ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
