ಶಿವಮೊಗ್ಗ:ಭಾರತೀಯ ಜನತಾ ಪಕ್ಷ ಅವರ ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಬಿಜೆಪಿಗೆ ಹೋಗುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಇದನ್ನೂ ಓದಿ:ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಮೋದಿ ಕೆಂಡಾಮಂಡಲ!
ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಬೆನ್ನಲ್ಲೇ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮನ್ನು ಉಚ್ಚಾಟಿಸಿರುವುದಕ್ಕೆ ಹೆದರುವುದಿಲ್ಲ. ಆದರೆ ಉಚ್ಚಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ಮಾಧ್ಯಮಗಳ ಮೂಲಕ ನನಗೆ ಗೊತ್ತಾಗಿದೆ. ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ ಬಂದಿದ್ದಾರೆ. ಅವರು ಷಡ್ಯಂತ್ರ ಮಾಡುತ್ತಾ ಬಂದರು. ಅವರು ಯಾವ ಮುಖ ಇಟ್ಟುಕೊಂಡು ಉತ್ತರ ನೀಡುತ್ತಾರೆ. ಅವರು ಪ್ರಕ್ರಿಯೆ ನೀಡಲಿ, ನಂತರ ನಾನು ಅವರಿಗೆ ಉತ್ತರ ನೀಡುತ್ತೇನೆ ಎಂದರು.
ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆ ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೇ ಕಣದಲ್ಲೇ ಉಳಿದಿದ್ದೇನೆ. ನಾಳೆಯಿಂದ ಮತ್ತಷ್ಟು ಉತ್ಸಾಹ, ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವೆ ಎಂದು ಈಶ್ವರಪ್ಪ ಮಾಧ್ಯಮದವರಿಗೆ ಸ್ಪಷ್ಟಪಡಿಸಿದರು.
ಬಿಜೆಪಿಯಿಂದ ಮಾಜಿ ಸಚಿವ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಚಾಟನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 19 =
Remember me
