ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ಸಚಿವರಿಗೆ ಭೇಟಿಯಾದ ವೇಳೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಧ್ವನಿ ಎತ್ತಿಲ್ಲ, ಉದ್ದೇಶವೂ ಅದಾಗಿರಲಿಲ್ಲವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು.
ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೈಗೊಂಡ ದೆಹಲಿ ಪ್ರವಾಸ, ಪ್ರಧಾನಿ, ಕೇಂದ್ರ ಸಚಿವರ ಭೇಟಿ, ರಾಜ್ಯದ ಸಂಸದರ ಸಭೆ ಯಶಸ್ವಿಯಾಗಿದೆ ಎಂದು ವಿಶ್ಲೇಷಿಸಿದರು.
ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಧ್ವನಿ ಎತ್ತಲು ಹೋಗಿದ್ದಲ್ಲ. ಪ್ರಧಾನಿ, ಕೇಂದ್ರ ಸಚಿವರ ಭೇಟಿ ಕಾಲಕ್ಕೆ ಅನ್ಯಾಯವಾಗಿದೆ ಎಂದೂ ಯಾರೂ ಪ್ರಸ್ತಾಪಿಸಿಲ್ಲ. ಗೃಹ ಸೇರಿದಂತೆ ವಿವಿಧ ಇಲಾಖೆಗಳ ಪ್ರಸ್ತಾವನೆಗಳನ್ನು ಸಲ್ಲಿಸಿದ್ದೇವೆ
ರಾಜ್ಯದ ಹೆದ್ದಾರಿಗಳ ಅಭಿವೃದ್ಧಿಗೆ ಸಚಿವ ನಿತಿನ್ ಗಡ್ಕರಿ ಒಂದು ಲಕ್ಷ ಕೋಟಿ ರೂ. ನೀಡುವ ಭರವಸೆ ಕೊಟ್ಟಿದ್ದಾರೆ. ಪ್ರಧಾನಿ ಬಳಿಯೂ ಅನೇಕ ಪ್ರಸ್ತಾವನೆಗಳನ್ನು ಸಲ್ಲಿಸಿದ್ದೇವೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ವಿಚಾರವಾಗಿ ನಾಲ್ಕು ಜನರು ಬಹಿರಂಗ ಹೇಳಿಕೆ, ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ನಿರ್ಧಾರವಾಗದು. ದೆಹಲಿಯಲ್ಲಿ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದೆವು ಎಂದು ಹೇಳಿದರು.
ಸೌಹಾರ್ದಯುತವಾಗಿ ಚರ್ಚೆಯಾಗಿದ್ದು, ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಜನೆ ಬಗ್ಗೆ ಯಾರೂ ಪ್ರಸ್ತಾಪ ಮಾಡಲಿಲ್ಲ. ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳಿರಬಹುದಷ್ಟೇ ಎಂದರು.
ಸ್ವಾಮೀಜಿಗಳ ಹೇಳಿಕೆ ತಪ್ಪು ಎನ್ನಲಾಗದು. ಅವರಿಗೂ ಕಾಳಜಿಯಿರಬಹುದು, ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ವೇದಿಕೆ, ಸಂದರ್ಭ ನೋಡಿ ಮಾತನಾಡಿದರೆ ಒಳ್ಳೆಯದು.
ಸಿಎಂ, ಡಿಸಿಎಂ ಬದಲಾವಣೆ ವಿಚಾರ ಪ್ರಸ್ತುತ, ಅಪ್ರಸ್ತುತ ಪ್ರಶ್ನೆಯಲ್ಲ. ಬದಲಾವಣೆ ಬೇಕು ಅನಿಸಿದರೆ ಹೈಕಮಾಂಡ್ ತಮ್ಮದೇ ಆದ ರೀತಿ-ರಿವಾಜು ಅನುಸರಿಸುತ್ತಾರೆ.
ವೀಕ್ಷಕರನ್ನು ಕಳುಹಿಸಿ ಅಭಿಪ್ರಾಯ ಸಂಗ್ರಹಿಸುವರು. ನಂತರ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ. ಎಲ್ಲ ರಾಷ್ಟ್ರೀಯ ಪಕ್ಷಗಳು ಇದೇ ಮಾರ್ಗೋಪಾಯ ಪಾಲಿಸುತ್ತವೆ ಎಂಬ ಮಾತನ್ನೂ ಡಾ.ಜಿ.ಪರಮೇಶ್ವರ್ ಸೇರಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬೇಡಿಕೆ ಸಮುದಾಯಗಳು ಮಂಡಿಸುವುದು ತಪ್ಪಲ್ಲ. ಯಾರಿಗೆ, ಯಾವ ಸಮುದಾಯಕ್ಕೆ ನೀಡಬೇಕೆಂದು ಹೈಕಮಾಂಡ್‌ಗೆ ಗೊತ್ತಿದೆ, ಅವರೇ ನಿರ್ಧರಿಸುತ್ತಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
