ಬೆಂಗಳೂರು: ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬರುವ ಅರ್ಜಿಗಳು 5 ವರ್ಷಕ್ಕೂ ಹೆಚ್ಚು ಅವಧಿಗೆ ಬಾಕಿ ಉಳಿದಿರುವುದನ್ನು ಗಮನಿಸಲಾಗಿದೆ. 5 ವರ್ಷವಾದರೂ ಪ್ರಕರಣ ಇತ್ಯರ್ಥಪಡಿಸದೆ ಇದ್ದರೆ, ನೀವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅರ್ಥ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ಗದರಿದ್ದಾರೆ.ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, Justice delayed is justice denied – ವಿಳಂಬ ಜಾಸ್ತಿಯಾದಷ್ಟು ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ವಿಳಂಬವೂ ಭ್ರಷ್ಟಾಚಾರವೇ ಎಂದರು.
ತಹಸೀಲ್ದಾರರು ಒಂದು ಅರ್ಜಿಯನ್ನು ಸ್ವೀಕರಿಸಿದರೆ, ಮೂರು ತಿಂಗಳಲ್ಲಿ ಇತ್ಯರ್ಥವಾಗಬೇಕು. ಉಪವಿಭಾಗಾಧಿಕಾರಿಗಳ ಬಳಿ ಬರುವ ಮನವಿಗಳ ಇತ್ಯರ್ಥಕ್ಕೆ ಬಹಳ ವಿಳಂಬ ಮಾಡ್ತಾರೆ. ಇದನ್ನು ಕನಿಷ್ಠ ಆರು ತಿಂಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳು ಒಂದು ವರ್ಷದಲ್ಲಿ ಇತ್ಯರ್ಥ ಮಾಡಬೇಕು ಎಂದು ತಾಕೀತು ಮಾಡಿದರು.ಜಿಲ್ಲಾಧಿಕಾರಿಗಳು ಅನಗತ್ಯವಾಗಿ ಪ್ರಕರಣ ಮುಂದೂಡುವುದು, ಕಕ್ಷಿದಾರರನ್ನು ಕಾಯಿಸುವುದು, ವಾದ-ವಿವಾದಗಳನ್ನು ಆಲಿಸಿದ ನಂತರ ತೀರ್ಪು ಬರೆಯಲು ವಿಳಂಬ ಮಾಡುವುದು ತರವಲ್ಲ.ಪ್ರಕರಣ ಇತ್ಯರ್ಥಗೊಳಿಸಲು ವಿಳಂಬ ಮಾಡಿದರೆ ನಮ್ಮ ಸರ್ಕಾರ ಸಹಿಸಲ್ಲ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − twelve =
Remember me
