ಬೆಂಗಳೂರು:ಶಿಕ್ಷಣ ಹಕ್ಕು ಕಾಯ್ದೆ ಅಡಿ (ಆರ್‌ಟಿಇ) 2024-25ನೇ ಸಾಲಿನ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲೆಗಳ ಮ್ಯಾಪಿಂಗ್ ಮಾಡುವಂತೆ ಡಿಡಿಪಿಐ ಮತ್ತು ಬಿಇಒ ಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ರಾಜ್ಯದ ಎಲ್ಲ ಸರ್ಕಾರಿ, ಬಿಬಿಎಂಪಿ ಶಾಲೆಗಳು, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ಮ್ಯಾಪಿಂಗ್ ಮಾಡುವುದು. ಅಲ್ಪಸಂಖ್ಯಾತ ಶಾಲೆಗಳೆಂದು ೋಷಣಾ ಪತ್ರ ಪಡೆದಿರುವ, ಈಗಾಗಲೇ ಮುಚ್ಚಿರುವ ಮತ್ತು ನ್ಯಾಯಾಲಯದ ತಡೆಯಾಜ್ಞೆ ಪಡೆದಿರುವ ಶಾಲೆಗಳನ್ನು ಪಟ್ಟಿಯಿಂದ ಕೈಬಿಡಬೇಕು. ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಮಾತ್ರ ನಡೆಸುವ ಶಾಲೆಗಳನ್ನು ಪಟ್ಟಿಯಲ್ಲಿ ಸೇರಿಸಬಾರದು. 2023ರ ಡಿ.31ರಲ್ಲಿದ್ದ ದಾಖಲಾತಿ ಸಂಖ್ಯೆಯನ್ನು ಆಧರಿಸಿ ಶೇ.25 ಸೀಟು ಹಂಚಿಕೆಗೆ ಪರಿಗಣಿಸುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ನೆರೆಹೊರೆ ಶಾಲೆಗಳಿಗೆ ಸಂಬಂಧಿಸಿದಂತೆ ನಿಗದಿತ ಅವಧಿಯಲ್ಲಿ ಆಕ್ಷೇಪಣೆಗಳನ್ನು ಸ್ವೀಕರಿಸಿ, ದತ್ತಾಂಶ ಪರಿಶೀಲಿಸಿ, ನೈಜತೆಯನ್ನು ಖಾತರಿ ಮಾಡಿಕೊಂಡು ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡುವುದು ಬಿಇಒ ಗಳ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.
ಆರ್‌ಟಿಇ ತಾತ್ಕಾಳಿಕ ವೇಳಾಪಟ್ಟಿ
ೆ.7- 2024-25ನೇ ಸಾಲಿನ ಆರ್‌ಟಿಟಿ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಪ್ರಕಟಿಸುವುದು. ೆ.23- ಶಾಲೆಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸುವುದು, ೆ.28- ನೆರೆಹೊರೆ ಶಾಲೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕೊನೇ ದಿನ. ಮಾ.4- ಶೇ.25 ಸೀಟುಗಳು ಲಭ್ಯವಿರುವ ಶಾಲೆಗಳ ಪಟ್ಟಿಯನ್ನು ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಹಾಗೂ ಕಚೇರಿ ಸೂಚನಾಲಕದಲ್ಲಿ ಪ್ರಕಟಿಸುವುದು, ಮಾ.20,21- ಪ್ರಾಯೋಗಿಕವಾಗಿ ಅರ್ಜಿ ಸಲ್ಲಿಕೆ ಆರಂಭ, ಮಾ.22ರಿಂದ-ಏ-22ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ, ಏ.30- ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + nineteen =
Remember me
