ಬೆಂಗಳೂರು:ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರ ನಡುವೆ ಸಾಕಷ್ಟು ಟೀಕೆ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು.
ಇದೀಗ ಮುರುಗೇಶ್ ನಿರಾಣಿ ಸೇರಿದಂತೆ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸಾರ್ವಜನಿಕವಾಗಿ ಮುಜುಗರ ತರುವಂತಹ ಟೀಕೆ ಮಾಡುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಕೇಂದ್ರ ಶಿಸ್ತು ಸಮಿತಿ ಕಾರಣ ಕೇಳಿ ನೋಟಿಸ್ ನೀಡಿದೆ.
ಯತ್ನಾಳ್ ಸ್ವಪಕ್ಷ ನಾಯಕರ ವಿರುದ್ಧವೇ ಸಾರ್ವಜನಿಕವಾಗಿ ನೀಡಿರುವ ಹೇಳಿಕೆ ವಿಪಕ್ಷಗಳ ಟೀಕೆಗೂ ಕಾರಣವಾಗಿತ್ತು. ಯತ್ನಾಳ್ ನಡೆ ಬಿಜೆಪಿ ಹೈಕಮಾಂಡ್​​ಗೂ ಮುಜುಗರ ತಂದಿತ್ತು ಎನ್ನಲಾಗಿದೆ. ಹೀಗಾಗಿ ಬಸನಗೌಡ ಪಾಟೀಲ್ ಅವರಲ್ಲಿ ಕಾರಣ ಕೇಳಿ, ನೋಟಿಸ್ ಕಳುಹಿಸಲಾಗಿದೆ ಎನ್ನಲಾಗಿದೆ.
ಫ್ಯಾಕ್ಸ್​ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ನೋಟಿಸ್ ತಲುಪಿಸಿದ್ದು, 15 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಲಾಗಿದೆ. ರಾಜ್ಯದ ಶಿಸ್ತು ಸಮಿತಿಯಿಂದ ಮೂರು ದಿನಗಳ ಹಿಂದೆ ಬಸನಗೌಡ ಪಾಟೀಲ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿತ್ತು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven + 4 =
Remember me
