ಬೆಂಗಳೂರು: ಪಿಯು ಇಲಾಖೆ ಹೊರಡಿಸಿರುವ ವೇಳಾಪಟ್ಟಿ ಪ್ರಕಾರ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆ ನಡೆಸದೆ ಕರ್ತವ್ಯ ಎಸಗಿರುವ ಆರೋಪದಡಿ ಇಲಾಖೆಯು ಬೆಂಗಳೂರು ದಕ್ಷಿಣ, ಉತ್ತರ ಶೈಕ್ಷಣಿಕ ಜಿಲ್ಲೆಗಳ ಜಿಲ್ಲಾ ಉಪ ನಿರ್ದೇಶಕರಿಗೆ ನೋಟಿಸ್ ನೀಡಿದೆ.
ಇಲಾಖೆ ಖಜಾನೆಯಲ್ಲಿ ಶೇಖರಿಸಿಟ್ಟಿರುವ ದ್ವಿತೀಯ ಪಿಯು ಪ್ರಶ್ನೆಪತ್ರಿಕೆಗಳನ್ನು ಬಳಸಿಕೊಂಡು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸುವಂತೆ ರಾಜ್ಯದ ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿ ವೇಳಾಪಟ್ಟಿ ನಿಗದಿ ಮಾಡಲಾಗಿತ್ತು. ಆದರೆ, ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲೆಯ ಕಾಲೇಜುಗಳಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲು ಕ್ರಮ ವಹಿಸದಿರುವುದು ಇಲಾಖೆ ಗಮನಕ್ಕೆ ಬಂದಿದೆ.
ಸಂಬಂಧಪಟ್ಟ ಕಾಲೇಜುಗಳು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯನ ಕಾರಣವಾಗಿದೆ ಎಂದು ತಿಳಿದು ಬೆಂ. ಉತ್ತರ ಡಿಡಿಪಿಯು ವಿ.ರಾಜಶೇಖರ ಹಾಗೂ ದಕ್ಷಿಣ ಜಿಲ್ಲೆ ಡಿಡಿಪಿಯು ಬಿ.ಎಂ. ರಾಜಕುಮಾರ್ ಅವರಿಗೆ ನೋಟಿಸ್ ನೀಡಲಾಗಿದೆ. ಇಲಾಖೆಯ ನೀತಿ-ನಿಯಮಗಳಿಗೆ ಅಗೌರವ ತೋರಿಸುವ ರೀತಿಯಲ್ಲಿ ವರ್ತಿಸಲಾಗಿದ್ದು, 24 ಗಂಟೆಯೊಳಗೆ ಸಮಜಾಯಿಸಿ ನೀಡದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಇಬ್ಬರು ಡಿಡಿಪಿಯುಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರಭಾರದಲ್ಲಿಟ್ಟು ಆದೇಶ ಹೊರಡಿಸಿದೆ.
ಗೊಂದಲ ಮೂಡಿಸಿದ ಪ್ರಶ್ನೆಪತ್ರಿಕೆ: ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ಶುಕ್ರವಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಡೆಸಿದ ಪೂರ್ವ ಸಿದ್ಧತಾ ಪರೀಕ್ಷೆಯ ಆಂಗ್ಲ ಭಾಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಪರೀಕ್ಷೆ ಆರಂಭಕ್ಕೂ ಮೊದಲೇ ಪ್ರಶ್ನೆಪತ್ರಿಕೆ ವಿದ್ಯಾರ್ಥಿಗಳ ವಾಟ್ಸ್ ಆಪ್​ನಲ್ಲಿ ಸಿಕ್ಕಿದೆ. ಆದರೆ, ಇದು ಸೋರಿಕೆ ಅಲ್ಲ. ನಾವು ಪ್ರಶ್ನೆಪತ್ರಿಕೆಯನ್ನು ಖಜಾನೆಯಲ್ಲಿಟ್ಟಿರಲಿಲ್ಲ. ವಿದ್ಯಾರ್ಥಿಗಳ ಕಲಿಕೆಗಾಗಿ ಪರೀಕ್ಷೆ ನಡೆಸುತ್ತೇವೆ ಅಷ್ಟೇ ಎಂದು ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿ ಪ್ರತಿಕ್ರಿಯಿಸಿದ್ದು, ಇಲಾಖೆ ವತಿಯಿಂದ ನಡೆಸುತ್ತಿರುವ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ. ಪ್ರಾಂಶುಪಾಲರ ಸಂಘದಿಂದ ನಡೆಸುವ ಪ್ರಶ್ನೆಪತ್ರಿಕೆಯಾಗಿದೆ. ಆದರೆ, ವಿದ್ಯಾರ್ಥಿಗಳು ಗೊಂದಲಕ್ಕೆ ಸಿಲುಕಬೇಡಿ ಎಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಂಘ- ಸಂಸ್ಥೆಗಳು ನಡೆಸುವ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಲೀಕ್ ಆಗುತ್ತಲೇ ಇದ್ದು, ಶಿಕ್ಷಣ ಇಲಾಖೆ ಇಂಥ ಪರೀಕ್ಷೆಯನ್ನು ಬ್ಯಾನ್ ಮಾಡಿ ಸಂಪೂರ್ಣವಾಗಿ ಮಂಡಳಿಯೇ ನಡೆಸದಿರುವುದು ದುರಂತ.
ಅನಧಿಕೃತ ಪರೀಕ್ಷೆ
ಪಿಯು ಇಲಾಖೆ ನಡೆಸುವ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಯಾವುದೇ ಲೀಕ್ ಆಗಿಲ್ಲ. ಪ್ರಾಂಶುಪಾಲರ ಸಂಘ ಅನಧಿಕೃತವಾಗಿ ಪರೀಕ್ಷೆ ನಡೆಸಿದೆ. ಆ ಪ್ರಶ್ನೆಪತ್ರಿಕೆಗಳು ಲೀಕ್ ಆಗಿರುವ ಸಾಧ್ಯತೆ ಇದೆ. ಈ ರೀತಿ ಅನಧಿಕೃತವಾಗಿ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಮುಂದಾ ಗುತ್ತೇನೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + three =
Remember me
