ಬೆಂಗಳೂರು:ನರೇಗಾ ಯೋಜನೆಯಡಿ ನೋಂದಾಯಿಸಿದ ನಿಷ್ಕ್ರಿಯ ಹಾಗೂ ಅನರ್ಹ ಕಾಯಕ ಬಂಧುಗಳಿಗೆ ಗೇಟ್ ಪಾಸ್ ನೀಡಲು ಸರ್ಕಾರ ಮುಂದಾಗಿದೆ.
ನಿಷ್ಕ್ರಿಯ 88, 948, ಅನರ್ಹ 11,748 ಕಾಯಕ ಬಂಧುಗಳ ಹೆಸರು ಸ್‌ಟಾನಿಂದ ತೆಗೆಯಲು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ಸಿಇಒಗಳಿಗೆ ಸೂಚನೆ ನೀಡಿದೆ.
ಈವರೆಗೆ 1,84,842 ಮೇಟ್ ಗಳ ಮಾಹಿತಿಯನ್ನು ಸ್‌ಟಾವೇರ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ಪೈಕಿ ಶೇ.50 ರಷ್ಟು ಮಂದಿ ಸಕ್ರಿಯವಲ್ಲದವರನ್ನು ಅಪ್‌ಲೋಡ್ ಮಾಡಿ ರುವುದು ಸರ್ವೇ ಮೂಲಕ ತಿಳಿದು ಬಂದಿದೆ. ಹಾಗಾಗಿ ನಿಷ್ಕ್ರಿಯರು ಹಾಗೂಅನರ್ಹರನ್ನು ಕೈಬಿಡುವಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಧಾರವಾಡ, ಬೆಳಗಾವಿ, ಬಳ್ಳಾರಿ, ವಿಜಯನಗರ, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ ಮತ್ತು ಉತ್ತರ ಕನ್ನಡ ಜಿಲ್ಲೆ ಸಿಇಒಗಳಿಗೆ ನಿರ್ದೇಶನ ನೀಡಲಾಗಿದೆ.
ಅಲ್ಲದೆ, ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಹೆಚ್ಚಿಸಲು ಹಾಗೂ ಕಾಯಕ ಸಂಘಗಳನ್ನು ಸಕ್ರಿಯಗೊಳಿಸುವ ಸಲುವಾಗಿ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಕಾಯಕ ಬಂಧುಗಳಿಗೆ ತರಬೇತಿ ನೀಡಲು 20 ಜಿಲ್ಲೆಯ 50 ತಾಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ತಾಲೂಕುಗಳಲ್ಲಿ ಮೊದಲ ಹಂತವಾಗಿ 15,000 ಕಾಯಕ ಬಂಧುಗಳಿಗೆ ತರಬೇತಿ ನೀಡಲು ಉದ್ದೇಶಿಸಿರುವುದಾಗಿಯೂ ಸುತ್ತೋಲೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
