ಬೆಂಗಳೂರು:ಬೆಂಗಳೂರು ಟರ್ ಕ್ಲಬ್ನಲ್ಲಿ (ರೇಸ್ ಕೋರ್ಸ್) ಕುದುರೆ ರೇಸ್ ಆಯೋಜನೆಗೆ ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ಮುಂದಿನ 10 ದಿನಗಳಲ್ಲಿ ಕಾನೂನುಬದ್ಧವಾಗಿ ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ರೇಸ್ ಆಯೋಜನೆಗೆ ಪರವಾನಗಿ ನೀಡದ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರಾದ ಶ್ರೀರಂಗ, ರೇಸ್‌ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರ್ಕಾರದ ಹಣಕಾಸು ಕಾರ್ಯದರ್ಶಿಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸದಸ್ಯರಾಗಿದ್ದಾರೆ. ಕುದುರೆ ಪಂದ್ಯಗಳ ಆಯೋಜನೆಯ ಎಲ್ಲ ಚಟುವಟಿಕೆಗಳು ಸರ್ಕಾರಕ್ಕೆ ತಿಳಿದಿರುತ್ತದೆ. ಹಾಗಾಗಿ ಅಕ್ರಮಗಳನ್ನು ನಡೆಸುವ ಪ್ರಮೇಯವಿಲ್ಲ ಎಂದರು.
ಅಲ್ಲದೆ, ತೆರಿಗೆ ವಂಚನೆಗಾಗಿ ಅಕ್ರಮವಾಗಿ ಬೆಟ್ಟಿಂಗ್ ಮಾಡಿದ ಆರೋಪದಲ್ಲಿ ಆರೋಪ ಪಟ್ಟಿ ದಾಖಲಿಸಿರುವ ಬುಕ್ಕಿಗಳ ಪರವಾನಿಗೆಯನ್ನು ರದ್ದು ಪಡಿಸುವುದಕ್ಕಾಗಿ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ, ಕುದುರೆ ಪಂದ್ಯಗಳ ಆಯೋಜನೆಯಲ್ಲಿ ಬುಕ್ಕಿ ಕಂಪನಿಗಳಿಗೆ ಯಾವುದೇ ಸಂಬಂಧವಿರುವುದಿಲ್ಲ. ಹೀಗಾಗಿ ಕುದುರೆ ಪಂದ್ಯಗಳ ಆಯೋಜನೆಗೆ ಅವಕಾಶ ಕಲ್ಪಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಕುದುರೆ ಪಂದ್ಯಾವಳಿಗಳ ಆಯೋಜನೆಗೆ ಪರವಾನಗಿ ನೀಡುವ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸುಮಾರು 2 ತಾಸು ಚರ್ಚೆಯಾಗಿದೆ. ಜತೆಗೆ, ಈ ವಿಚಾರವಾಗಿ ಇತರೆ ಪಾಲುದಾರರೊಂದಿಗೆ ಚರ್ಚೆ ನಡೆಸಬೇಕಾಗಿದೆ. ಅಕ್ರಮಗಳಿಗೆ ಕಡಿವಾಣ ಹಾಕಿ ಕಾನೂನುಬದ್ಧವಾಗಿ ಷರತ್ತುಗಳನ್ನು ವಿಧಿಸಿ ಪರವಾನಗಿ ನೀಡಲು ನಾಲ್ಕು ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ನಾಲ್ಕು ವಾರ ವಿಳಂವಾಗಲಿದ್ದು, ಮುಂದಿನ 10 ದಿನಗಳಲ್ಲಿ ಅರ್ಜಿದಾರರ ಮನವಿಯನ್ನು ಪರಿಗಣಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಜೂ.6ಕ್ಕೆ ಮುಂದೂಡಿತು.
ಪ್ರಕರಣವೇನು?ಪ್ರತಿ ವರ್ಷ ಕುದುರೆ ಪಂದ್ಯಗಳ ಆಯೋಜನೆಗೆ ತಿಂಗಳಿಗೊಮ್ಮೆ ಪರವಾನಗಿ ಪಡೆಯುವುದು ಸಾಮಾನ್ಯವಾಗಿದೆ. ಆದರೆ, ಮಾರ್ಚ್ ಬಳಿಕ ಕುದರೆ ಪಂದ್ಯಗಳ ಆಯೋಜನೆಗೆ ಸರ್ಕಾರ ಅನುಮತಿ ನೀಡಿರಲಿಲ್ಲ.
ಇದಾದ ಬಳಿಕ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಮನವಿಯ ಕುರಿತಂತೆ ಪ್ರತಿಕ್ರಿಯೆ ನೀಡಿರಲಿಲ್ಲ. ಈ ನಿಟ್ಟಿನಲ್ಲಿ ಕುದುರೆ ಪಂದ್ಯಾವಳಿಗಳಿಂದ ಸುಮಾರು 2,000 ಸಿಬ್ಬಂದಿ ಜೀವನೋಪಾಯಕ್ಕೆ ತೊಂದರೆಯಾಗಿದೆ. ರೇಸ್ ಆಯೋಜನೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + seven =
Remember me
